
ಮುಂಬೈ: ಸತತ 4ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಚೇತೋಹಾರಿ ವಹಿವಾಟು ನಡೆಸಿದ್ದು, ಮಂಗಳವಾರವೂ ಷೇರುಮಾರುಕಟ್ಟೆ ಸೂಚ್ಯಂಕಗಳು ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಕೇಂದ್ರ ಸರ್ಕಾರ ತನ್ನ ಸರಕು ಮತ್ತು ಸೇವಾ ತೆರಿಗೆ ಅಥವಾ ಜಿಎಸ್ ಟಿ ತೆರಿಗೆ ನಿಯಮಗಳಲ್ಲಿ ಸುಧಾರಣೆಗೆ ಮುಂದಾಗಿದ್ದು, ಷೇರು ಮಾರುಕಟ್ಟೆ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎನ್ನಲಾಗಿದೆ.
ಪರಿಣಾಮ ಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.46ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.42ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು ಬರೊಬ್ಬರಿ 370.64ಅಂಕಗಳ ಏರಿಕೆಯೊಂದಿಗೆ 81,644.39 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 103.70 ಅಂಕಗಳ ಏರಿಕೆಯೊಂದಿಗೆ 24,980.65 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಇಂಧನ, ತೈಲ ಮತ್ತು ಗ್ಯಾಸ್ ವಲಯದ ಷೇರುಗಳ ಮೌಲ್ಯ ಗಣನೀಯ ಏರಿಕೆ ಕಂಡಿದ್ದು, ರಕ್ಷಣಾ ವಲಯ, ತಂತ್ರಜ್ಞಾನ, ವಿದ್ಯುತ್ ಮತ್ತು ಫೈನಾನ್ಸ್ ವಿಭಾಗ ಷೇರುಗಳ ಮೌಲ್ಯ ಕುಸಿದಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಟಾಟಾ ಮೋಟರ್ಸ್ ಸಂಸ್ಥೆಯ ಷೇರು ಸುಮಾರು ಶೇಕಡಾ 3.50 ರಷ್ಟು ಏರಿಕೆಯೊಂದಿಗೆ ಭಾರಿ ಮುನ್ನಡೆ ಸಾಧಿಸಿದ್ದರೆ, ಉಳಿದಂತೆ ಅದಾನಿ ಪೋರ್ಟ್, ರಿಲಯನ್ಸ್, ಎಟರ್ನಲ್, ಟೆಕ್ ಮಹೀಂದ್ರ, ಹೀರೋ ಮೋಟಾರ್ ಕಾರ್ಪ್, ಬಜಾಜ್ ಆಟೋ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಡಾ. ರೆಡ್ಡೀಸ್ ಲ್ಯಾಬೋರೇಟರೀಸ್, ಸಿಪ್ಲಾ, ಹಿಂಡಾಲ್ಕೊ ಇಂಡಸ್ಟ್ರೀಸ್, ಬಜಾಜ್ ಫಿನ್‌ಸರ್ವ್, ಎಂ & ಎಂ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
ಫಾರ್ಮಾ ಹೊರತುಪಡಿಸಿ, ಇತರ ಎಲ್ಲಾ ವಲಯ ಸೂಚ್ಯಂಕಗಳು ಟೆಲಿಕಾಂ, ಎಫ್‌ಎಂಸಿಜಿ, ಮಾಧ್ಯಮ, ಆಟೋ, ತೈಲ ಮತ್ತು ಅನಿಲ ತಲಾ 1% ರಷ್ಟು ಏರಿಕೆಯಾಗಿ ಕೊನೆಗೊಂಡವು. ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ತಲಾ 1% ರಷ್ಟು ಏರಿಕೆಯಾಗಿವೆ.
Advertisement