
ಮುಂಬೈ: ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸುಂಕ ಏರಿಕೆ ನಿರ್ಧಾರಕ್ಕೆ ತಾತ್ಕಾಲಿಕ ತಡೆ ಹೇರುತ್ತಿದ್ದಂತೆಯೇ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆಯಾಗಿದ್ದು, ಸೆನ್ಸೆಕ್ಸ್ 78 ಸಾವಿರ ಗಡಿದಾಟಿದೆ.
ಮಂಗಳವಾರ ಷೇರುಮಾರುಕಟ್ಟೆ ಸೂಚ್ಯಂಕಗಳು ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದ್ದು, ಎಫ್ ಎಂಸಿಜಿ ಹೊರತು ಪಡಿಸಿ ಉಳಿದೆಲ್ಲಾ ವಲಯದ ಷೇರುಗಳು ಲಾಭಾಂಶ ಕಂಡಿವೆ.
ಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.1.81ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.1.62ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು ಬರೊಬ್ಬರಿ 1,397.07ಅಂಕಗಳ ಏರಿಕೆಯೊಂದಿಗೆ 78,583.81 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 378.20 ಅಂಕಗಳ ಏರಿಕೆಯೊಂದಿಗೆ 23,739.25 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಶ್ರೀರಾಮ್ ಫೈನಾನ್ಸ್, ಎಲ್ & ಟಿ, ಆದಿ ಪೋರ್ಟ್ಸ್, ಭಾರತ್ ಎಲೆಕ್ಟ್ರಾನಿಕ್ಸ್, ಇಂಡಸ್ಇಂಡ್ ಬ್ಯಾಂಕ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಟ್ರೆಂಟ್, ಬ್ರಿಟಾನಿಯಾ ಇಂಡಸ್ಟ್ರೀಸ್, ಹೀರೋ ಮೋಟೋಕಾರ್ಪ್, ನೆಸ್ಲೆ ಇಂಡಿಯಾ ಮತ್ತು ಐಷರ್ ಮೋಟಾರ್ಸ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
Advertisement