ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೆ 39 ಪೈಸೆ ಕುಸಿತ; ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಇಳಿಕೆ!

ಪ್ರತಿ ಡಾಲರ್ ಗೆ 87.46 ರೂ. ಗೆ ತಲುಪಿ, ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಬುಧವಾರ ಮತ್ತೆ 39 ಪೈಸೆ ಕುಸಿದಿದ್ದು, ಪ್ರತಿ ಡಾಲರ್ ಗೆ 87.46 ರೂ. ಗೆ ತಲುಪಿ, ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಅತಿದೊಡ್ಡ ವ್ಯಾಪಾರ ಪಾಲುದಾರರಾದ ಚೀನಾ, ಮೆಕ್ಸಿಕೊ ಮತ್ತು ಕೆನಡಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ದಂಡನಾತ್ಮಕ ಸುಂಕಗಳನ್ನು ವಿಧಿಸಿದ್ದಾರೆ. ಪರಿಣಾಮ ಜಾಗತಿಕ ಹಣಕಾಸು ಮಾರುಕಟ್ಟೆಗಳು ಅಲುಗಾಡಿದ್ದು, ವ್ಯಾಪಾರ ಯುದ್ಧದ ಭಯವನ್ನು ಹೆಚ್ಚಿಸಿದೆ. ಈ ಬೆಳವಣಿಗೆಗಳಿಂದಾಗಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದೆ.

ಇದಲ್ಲದೆ, ಭಾರತೀಯ ರಿಸರ್ವ್ ಬ್ಯಾಂಕ್‌ನ ದರ ಕಡಿತದ ಕಳವಳಗಳು ಮತ್ತು ವಿದೇಶಿ ಮಾರುಕಟ್ಟೆಯಲ್ಲಿ ಅಮೆರಿಕನ್ ಕರೆನ್ಸಿಯ ವ್ಯಾಪಕ ಬಲವು ಹೂಡಿಕೆದಾರರ ಭಾವನೆಗಳನ್ನು ಮತ್ತಷ್ಟು ಕೆರಳಿಸಿದೆ.

ಸಾಂದರ್ಭಿಕ ಚಿತ್ರ
Trump Trade War: ಡಾಲರ್ ಎದುರು ಪಾತಾಳಕ್ಕೆ ಕುಸಿದ ರೂಪಾಯಿ ಮೌಲ್ಯ!

ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯ ಪ್ರತಿ ಡಾಲರ್ ಗೆ ರೂಪಾಯಿ ಮೌಲ್ಯ 87.13ರಷ್ಟು ಇತ್ತು. ದಿನಾಂತ್ಯದ ವೇಳೆಗೆ ಇದು 87.46 ರೂಪಾಯಿಗಳಿಗೆ ತಲುಪಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com