
ಮುಂಬೈ: ನಿನ್ನೆಯಷ್ಟೇ ಮಹಾ ಕುಸಿತ ದಾಖಲಿಸಿದ್ದ ಭಾರತೀಯ ಷೇರುಮಾರುಕಟ್ಟೆ ಮಂಗಳವಾರ ಅಲ್ಪ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿವೆ.
ನಿನ್ನೆ ಒಂದೇ ದಿನ ಭಾರಿ ಪ್ರಮಾಣದಲ್ಲಿ ಕುಸಿದಿದ್ದ ಭಾರತೀಯ ಷೇರುಮಾರುಕಟ್ಟೆ ಮಂಗಳವಾರ ಅಲ್ಪ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.22ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.53ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು 169.62 ಅಂಕಗಳ ಏರಿಕೆಯೊಂದಿಗೆ 76,499.63 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 121.65 ಅಂಕಗಳ ಏರಿಕೆಯೊಂದಿಗೆ 23,207.60 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಐಟಿ ಮತ್ತು ಎಫ್ಎಂಪಿಸಿಜಿ ವಲಯದ ಷೇರುಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಲಯದ ಷೇರುಗಳು ಗ್ರೀನ್ ನಲ್ಲೇ ದಿನದ ವಹಿವಾಟು ಅಂತ್ಯಗೊಳಿಸಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ನಿಫ್ಟಿಯಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಅದಾನಿ ಎಂಟರ್‌ಪ್ರೈಸಸ್, ಅದಾನಿ ಪೋರ್ಟ್ಸ್, ಎನ್‌ಟಿಪಿಸಿ, ಹಿಂಡಾಲ್ಕೊ ಮತ್ತು ಶ್ರೀರಾಮ್ ಫೈನಾನ್ಸ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಎಚ್‌ಸಿಎಲ್ ಟೆಕ್, ಎಚ್‌ಯುಎಲ್, ಅಪೊಲೊ ಆಸ್ಪತ್ರೆಗಳು, ಟೈಟಾನ್ ಕಂಪನಿ ಮತ್ತು ಟಿಸಿಎಸ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
Advertisement