
ಮುಂಬೈ: ಮಹಾ ಕುಸಿತದ ಬಳಿಕ ಕ್ರಮೇಣ ಚೇತರಿಕೆಯತ್ತ ಸಾಗಿರುವ ಭಾರತೀಯ ಷೇರುಮಾರುಕಟ್ಟೆ ಗುರುವಾರ ಮತ್ತೆ ಗ್ರೀನ್ ನಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿವೆ.
ಗುರುವಾರ ಕೂಡ ಭಾರತೀಯ ಷೇರುಮಾರುಕಟ್ಟೆ ಅಲ್ಪ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.42ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.42ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು 318.74 ಅಂಕಗಳ ಏರಿಕೆಯೊಂದಿಗೆ 77,042.82 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 98.60 ಅಂಕಗಳ ಏರಿಕೆಯೊಂದಿಗೆ 23,311.80 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಇಂಧನ ಮತ್ತು ಮೆಟಲ್ ಮತ್ತು ಪಿಎಸ್ ಯು ಬ್ಯಾಂಕಿಂಗ್ ವಲಯದ ಷೇರುಗಳು ಉತ್ತಮ ವಹಿವಾಟು ನಡೆಸಿ ಲಾಭಾಂಶ ಗಳಿಸಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಬ್ಲೂ ಚಿಪ್ ಪ್ಯಾಕ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಅದಾನಿ ಪೋರ್ಟ್ಸ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬಜಾಜ್ ಫಿನ್‌ಸರ್ವ್, ಭಾರ್ತಿ ಏರ್‌ಟೆಲ್, ಟಾಟಾ ಮೋಟಾರ್ಸ್, ಇಂಡಸ್‌ಇಂಡ್ ಬ್ಯಾಂಕ್, ಎನ್‌ಟಿಪಿಸಿ, ಮಾರುತಿ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಆಕ್ಸಿಸ್ ಬ್ಯಾಂಕ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ.
ಅಂತೆಯೇ ಟ್ರೆಂಟ್, ಟಾಟಾ ಕನ್ಸ್ಯೂಮರ್, ಡಾ. ರೆಡ್ಡೀಸ್ ಲ್ಯಾಬ್ಸ್, ಎಚ್‌ಸಿಎಲ್ ಟೆಕ್, ವಿಪ್ರೋ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
Advertisement