
ಮುಂಬೈ: ಮಹಾ ಕುಸಿತದ ಬಳಿಕ ಸತತ 3 ದಿನಗಳ ಕಾಲ ಚೇತರಿಕೆಯತ್ತ ಸಾಗಿದ್ದ ಭಾರತೀಯ ಷೇರುಮಾರುಕಟ್ಟೆ ಶುಕ್ರವಾರ ಭಾರಿ ಕುಸಿತ ಕಂಡಿದ್ದು, ಆ ಮೂಲಕ ಮಾರುಕಟ್ಟೆಯ ಸತತ ಏರಿಕೆಗೆ ಬ್ರೇಕ್ ಬಿದ್ದಿದೆ.
ವಾರದ ಅಂತಿಮ ದಿವಾದ ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಭಾರಿ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.55ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.47ರಷ್ಟು ಕುಸಿತ ದಾಖಲಿಸಿದೆ. ಸೆನ್ಸೆಕ್ಸ್ ಇಂದು 423.49 ಅಂಕಗಳ ಕುಸಿತದೊಂದಿಗೆ 76,619.33 ಅಂಕಗಳಿಗೆ ಕುಸಿತವಾಗಿದ್ದರೆ, ನಿಫ್ಟಿ 108.60 ಅಂಕಗಳ ಇಳಿಕೆಯೊಂದಿಗೆ 23,203.20 ಅಂಕಗಳಿಗೆ ಕುಸಿದು ದಿನದ ಮತ್ತು ವಾರದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಐಟಿ ಮತ್ತು ಪಿಎಸ್ ಯು ಬ್ಯಾಂಕಿಂಗ್ ವಲಯದ ಷೇರುಗಳು ನಷ್ಟ ಅನುಭವಿಸಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ನಿಫ್ಟಿ ಪ್ಯಾಕ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಬಿಪಿಸಿಎಲ್, ರಿಲಯನ್ಸ್ ಇಂಡಸ್ಟ್ರೀಸ್, ಭಾರತ್ ಎಲೆಕ್ಟ್ರಾನಿಕ್ಸ್, ನೆಸ್ಲೆ ಇಂಡಿಯಾ ಮತ್ತು ಹಿಂಡಾಲ್ಕೊ ಇಂಡಸ್ಟ್ರೀಸ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಇನ್ಫೋಸಿಸ್, ಆಕ್ಸಿಸ್ ಬ್ಯಾಂಕ್, ಶ್ರೀರಾಮ್ ಫೈನಾನ್ಸ್, ಕೋಟಕ್ ಮಹೀಂದ್ರಾ ಬ್ಯಾಂಕ್, ಎಂ & ಎಂ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
Advertisement