
ಮುಂಬೈ: ಸತತ ಕುಸಿತದ ಹಾದಿಯಲ್ಲಿದ್ದ ಭಾರತೀಯ ಷೇರುಮಾರುಕಟ್ಟೆ ಮಂಗಳವಾರ ಚೇತೋಹಾರಿ ವಹಿವಾಟು ನಡೆಸಿದ್ದು, ಜಾಗತಿಕ ತೀವ್ರ ಸ್ಪರ್ಧೆಯ ಹೊರತಾಗಿಯೂ ಇಂದು ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.71ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.56ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು 535.23 ಅಂಕಗಳ ಏರಿಕೆಯೊಂದಿಗೆ 75,901.41 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 128.10 ಅಂಕಗಳ ಏರಿಕೆಯೊಂದಿಗೆ 22,957.25 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಪಿಎಸ್ ಯು ಬ್ಯಾಂಕಿಂಗ್, ಮೆಟಲ್ ವಲಯದ ಷೇರುಗಳು ಉತ್ತಮ ವಹಿವಾಟು ನಡೆಸಿ ಲಾಭಾಂಶ ಗಳಿಸಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಬಜಾಜ್ ಫೈನಾನ್ಸ್, ಆಕ್ಸಿಸ್ ಬ್ಯಾಂಕ್, ಬಜಾಜ್ ಫಿನ್‌ಸರ್ವ್, ಎಚ್‌ಡಿಎಫ್‌ಸಿ ಬ್ಯಾಂಕ್, ಟಾಟಾ ಮೋಟಾರ್ಸ್, ಟಾಟಾ ಸ್ಟೀಲ್, ಐಸಿಐಸಿಐ ಬ್ಯಾಂಕ್, ಮಹೀಂದ್ರಾ & ಮಹೀಂದ್ರಾ, ಜೊಮಾಟೊ, ಇಂಡಸ್‌ಇಂಡ್ ಬ್ಯಾಂಕ್, ಮಾರುತಿ ಸುಜುಕಿ ಇಂಡಿಯಾ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ.
ಅಂತೆಯೇ ಸನ್ ಫಾರ್ಮಾಸ್ಯುಟಿಕಲ್, ಲಾರ್ಸೆನ್ & ಟೂಬ್ರೊ, ಐಟಿಸಿ, ಎಚ್‌ಸಿಎಲ್ ಟೆಕ್ನಾಲಜೀಸ್, ಎನ್‌ಟಿಪಿಸಿ, ಪವರ್ ಗ್ರಿಡ್, ನೆಸ್ಲೆ ಇಂಡಿಯಾ, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಮತ್ತು ಏಷ್ಯನ್ ಪೇಂಟ್ಸ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
Advertisement