
ಮುಂಬೈ: ಭಾರತೀಯ ಷೇರುಮಾರುಕಟ್ಟೆ ಬುಧವಾರ ಭಾರಿ ಏರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳು ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಂಡಿದೆ.
ಬುಧವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.66ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.63ರಷ್ಟು ಏರಿಕೆ ದಾಖಲಿಸಿದೆ.
ಸೆನ್ಸೆಕ್ಸ್ ಇಂದು ಬರೊಬ್ಬರಿ 539.83ಅಂಕಗಳ ಏರಿಕೆಯೊಂದಿಗೆ 82,726.64 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 159 ಅಂಕಗಳ ಏರಿಕೆಯೊಂದಿಗೆ 25,219.90 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಬ್ಯಾಂಕಿಂಗ್ ಮತ್ತು ಇಂಧನ ವಲಯಗಳ ಷೇರುಗಳು ಉತ್ತಮ ವಹಿವಾಟು ನಡೆಸಿ ಲಾಭಾಂಶ ಗಳಿಸಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಟಾಟಾ ಮೋಟಾರ್ಸ್, ಭಾರ್ತಿ ಏರ್‌ಟೆಲ್, ಬಜಾಜ್ ಫೈನಾನ್ಸ್, ಮಾರುತಿ, ಬಜಾಜ್ ಫಿನ್‌ಸರ್ವ್, ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಹಿಂದೂಸ್ತಾನ್ ಯೂನಿಲಿವರ್, ಅಲ್ಟ್ರಾಟೆಕ್ ಸಿಮೆಂಟ್, ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಐಟಿಸಿ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
ಏಷ್ಯನ್ ಮಾರುಕಟ್ಟೆ ಉತ್ತಮ ವಹಿವಾಟು
ಏಷ್ಯಾದ ಮಾರುಕಟ್ಟೆಗಳಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಪಾನ್ ಜೊತೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದರಿಂದ ಜಪಾನ್‌ನ ನಿಕ್ಕಿ 225 ಸೂಚ್ಯಂಕವು ಶೇಕಡಾ 3.51 ರಷ್ಟು ಏರಿಕೆ ಕಂಡಿತು, ಆ ದೇಶದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇಕಡಾ 15 ರಷ್ಟು ತೆರಿಗೆ ವಿಧಿಸಲಾಯಿತು. ದಕ್ಷಿಣ ಕೊರಿಯಾದ ಕೋಸ್ಪಿ, ಜಪಾನ್‌ನ ನಿಕ್ಕಿ 225 ಸೂಚ್ಯಂಕ, ಶಾಂಘೈನ ಎಸ್‌ಎಸ್‌ಇ ಕಾಂಪೋಸಿಟ್ ಸೂಚ್ಯಂಕ ಮತ್ತು ಹಾಂಗ್ ಕಾಂಗ್‌ನ ಹ್ಯಾಂಗ್ ಸೆಂಗ್ ಮಾರುಕಟ್ಟೆಗಳು ಸಕಾರಾತ್ಮಕ ವಹಿವಾಟು ನಡೆಸಿವೆ.
Advertisement