
ಮುಂಬೈ: ಭಾರತೀಯ ಷೇರುಮಾರುಕಟ್ಟೆ ವಾರದ ಮೊದಲ ದಿನವೇ ಭಾರಿ ಕುಸಿತ ಕಂಡಿದ್ದು, ಷೇರುಮಾರುಕಟ್ಟೆಯ ಎರಡೂ ಸೂಚ್ಯಂಕಗಳು ಸೋಮವಾರ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಸೋಮವಾರ ಭಾರತೀಯ ಷೇರುಮಾರುಕಟ್ಟೆ ಗಣನೀಯ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.70ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.63ರಷ್ಟು ಕುಸಿತ ದಾಖಲಿಸಿದೆ.
ಸೆನ್ಸೆಕ್ಸ್ ಇಂದು ಬರೊಬ್ಬರಿ 572.07 ಅಂಕಗಳ ಕುಸಿತದೊಂದಿಗೆ 80,891.02 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 156.10 ಅಂಕಗಳ ಇಳಿಕೆಯೊಂದಿಗೆ 24,680.90 ಅಂಕಗಳಿಗೆ ಕುಸಿತವಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ರಿಯಲ್ ಎಸ್ಟೇಟ್ ಮತ್ತು ಮಾಧ್ಯಮ ಕ್ಷೇತ್ರಗಳ ಷೇರುಗಳ ಮೌಲ್ಯ ಗಣನೀಯ ಕುಸಿತಕಂಡಿದ್ದು, ಬಂಡವಾಳ ಸರಕುಗಳು, ಲೋಹ, ದೂರಸಂಪರ್ಕ, ಪಿಎಸ್‌ಯು ಬ್ಯಾಂಕ್, ಖಾಸಗಿ ಬ್ಯಾಂಕ್ ಗಳ ಷೇರುಗಳ ಮೌಲ್ಯ ಕುಸಿತವಾಗಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ನಿಫ್ಚಿಯಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಶ್ರೀರಾಮ್ ಫೈನಾನ್ಸ್, ಸಿಪ್ಲಾ, ಹೀರೋ ಮೋಟೋಕಾರ್ಪ್, HUL, SBI ಲೈಫ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಕೋಟಕ್ ಮಹೀಂದ್ರಾ ಬ್ಯಾಂಕ್, ವಿಪ್ರೋ, ಬಜಾಜ್ ಫೈನಾನ್ಸ್, ಭಾರ್ತಿ ಏರ್‌ಟೆಲ್, ಇಂಡಸ್‌ಇಂಡ್ ಬ್ಯಾಂಕ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
Advertisement