

ಮುಂಬೈ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಇಳಿಕೆ ಮಾಡಲಾಗಿದ್ದು, ನವೆಂಬರ್ 1, 2025 ಅಂದರೆ ಇಂದಿನಿಂದಲೇ ನೂತನ ದರ ಜಾರಿಗೆ ಬಂದಿದೆ.
ಹೌದು.. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆಯಾಗಿದ್ದು, ಇದರೊಂದಿಗೆ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರೋದ್ಯಮ ವಲಯಗಳಿಗೆ ಬಹುದೊಡ್ಡ ನಿರಾಳತೆ ದೊರೆತಂತಾಗಿದೆ. ಯಾಕಂದ್ರೆ, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಇಳಿಕೆ ಮಾಡಲಾಗಿದೆ. ನವೆಂಬರ್ 1, 2025 ರಿಂದಲೇ ಹೊಸ ದರಗಳು ಜಾರಿಗೆ ಬಂದಿವೆ.
ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಈ ಬೆಲೆ ಕಡಿತವನ್ನು ಘೋಷಿಸಿದ್ದು, ಪ್ರತಿ ಸಿಲಿಂಡರ್ ಬೆಲೆಯಲ್ಲಿ 5 ರೂಪಾಯಿ ಕಡಿತ ಆಗಿದೆ. ಹೊಸ ದರಗಳು ಇಂದಿನಿಂದ ಜಾರಿಗೆ ಬಂದಿದ್ದು, ದೇಶದ ವಿವಿಧ ಭಾಗಗಳಲ್ಲಿ 19 ಕೆಜಿ ತೂಕದ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆ ರೂ. 1590.50 ಕ್ಕೆ ಇಳಿದಿದೆ. ಈ ಹಿಂದೆ ಇದರ ಬೆಲೆ ರೂ. 1595.50 ಇತ್ತು. ಅಂದರೆ, ಪ್ರತಿ ಸಿಲಿಂಡರ್‌ಗೆ 5 ರೂಪಾಯಿಯಷ್ಟು ಕಡಿತಗೊಂಡಿದೆ.
ಗೃಹಬಳಕೆ ಗ್ಯಾಸ್ ದರದಲ್ಲಿ ಬದಲಾವಣೆ ಇಲ್ಲ
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಮತ್ತು ಹಳೆಯ ದರಗಳೇ ಮುಂದುವರಿಯಲಿವೆ.
Advertisement