
ಮುಂಬೈ: ವಾರದ ಮೊದಲ ದಿನವೇ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ಸೋಮವಾರ ಷೇರುಮಾರುಕಟ್ಟೆ ಸೂಚ್ಯಂಕಗಳು ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಸೋಮವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.72ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.74ರಷ್ಟು ಏರಿಕೆ ದಾಖಲಿಸಿದೆ.
ಸೆನ್ಸೆಕ್ಸ್ ಇಂದು ಬರೊಬ್ಬರಿ582.95 ಅಂಕಗಳ ಏರಿಕೆಯೊಂದಿಗೆ 81,790.12 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 183.40 ಅಂಕಗಳ ಏರಿಕೆಯೊಂದಿಗೆ 25,077.65 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಇಂಧನ, ಗ್ಯಾಸ್, ಪಿಎಸ್ ಯು ಬ್ಯಾಂಕಿಂಗ್ ವಲಯದ ಷೇರುಗಳು ಉತ್ತಮ ವಹಿವಾಟು ನಡೆಸಿ ಲಾಭಾಂಶ ಗಳಿಸಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಮ್ಯಾಕ್ಸ್ ಹೆಲ್ತ್‌ಕೇರ್, ಶ್ರೀರಾಮ್ ಫೈನಾನ್ಸ್, ಅಪೋಲೋ ಆಸ್ಪತ್ರೆಗಳು, ಟಿಸಿಎಸ್, ಟೆಕ್ ಮಹೀಂದ್ರಾ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಟಾಟಾ ಸ್ಟೀಲ್, ಅದಾನಿ ಪೋರ್ಟ್ಸ್, ಪವರ್ ಗ್ರಿಡ್ ಕಾರ್ಪ್, ಐಟಿಸಿ ಮತ್ತು ಎನ್‌ಟಿಪಿಸಿ ಸೇರಿದಂತೆ ಹಲವು ಷೇರುಗಳು ನಷ್ಟ ಅನುಭವಿಸಿವೆ.
Advertisement