

ಮುಂಬೈ: ಭಾರತೀಯ ಷೇರು ಮಾರುಕಟ್ಟೆಯ ಸತತ 6 ದಿನಗಳ ಏರಿಕೆಯ ನಾಗಾಲೋಟಕ್ಕೆ ಬ್ರೇಕ್ ಬಿದಿದ್ದು ವಾರದ ಕೊನೆಯ ದಿನದಂದು ಮಾರುಕಟ್ಟೆ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿವೆ.
ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.41ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.37ರಷ್ಟು ಇಳಿಕೆ ದಾಖಲಿಸಿದೆ.
ಸೆನ್ಸೆಕ್ಸ್ ಇಂದು 344.52 ಅಂಕಗಳ ಕುಸಿತದೊಂದಿಗೆ 84,211.88 ಅಂಕಗಳಿಗೆ ಕುಸಿತವಾಗಿದ್ದರೆ, ನಿಫ್ಟಿ 96.25 ಅಂಕಗಳ ಇಳಿಕೆಯೊಂದಿಗೆ 25,795.15 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಬ್ಯಾಂಕಿಂಗ್, ಬಂಡವಾಳ ಸರಕು ವಲಯಗಳ ಷೇರುಗಳು ನಷ್ಟ ಅನುಭವಿಸಿವೆ.
ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಹಿಂದೂಸ್ತಾನ್ ಯೂನಿಲಿವರ್, ಅಲ್ಟ್ರಾಟೆಕ್ ಸಿಮೆಂಟ್, ಕೋಟಕ್ ಮಹೀಂದ್ರಾ ಬ್ಯಾಂಕ್, ಅದಾನಿ ಪೋರ್ಟ್ಸ್, ಟೈಟಾನ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್ ಸಂಸ್ಥೆಯ ಷೇರುಗಳು ನಷ್ಟ ಕಂಡಿದೆ.
ರೂಪಾಯಿ ಮೌಲ್ಯ ಏರಿಕೆ
ಇನ್ನು ಭಾರತ-ಅಮೆರಿಕ ವ್ಯಾಪಾರ ಮಾತುಕತೆಗಳ ಬಗ್ಗೆ ಆಶಾವಾದ ಮತ್ತು ಜಾಗತಿಕ ಕಚ್ಚಾ ತೈಲ ಬೆಲೆಗಳಲ್ಲಿನ ಕುಸಿತದಿಂದ ಶುಕ್ರವಾರ ರೂಪಾಯಿ ಮೌಲ್ಯವು 10 ಪೈಸೆ ಏರಿಕೆಯಾಗಿದೆ. ಪ್ರಸ್ತುತ ರೂಪಾಯಿ ಮೌಲ್ಯ ಪ್ರತೀ ಡಾಲರ್ ಗೆ 87.78ರೂಗೆ ಏರಿಕೆಯಾಗಿದೆ.
Advertisement