
ಮುಂಬೈ: ಭಾರತೀಯ ಷೇರುಮಾರುಕಟ್ಟೆಯ ಸತತ 3ನೇ ದಿನಗಳ ಏರಿಕೆ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದ್ದು, ವಾರದ ಅಂತಿಮ ದಿನದಾಟದ ವಹಿವಾಟಿನಲ್ಲಿ ಷೇರುಮಾರುಕಟ್ಟೆ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.47ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.38ರಷ್ಟು ಇಳಿಕೆ ದಾಖಲಿಸಿದೆ.
ಸೆನ್ಸೆಕ್ಸ್ ಇಂದು 387.73 ಅಂಕಗಳ ಇಳಿಕೆಯೊಂದಿಗೆ 82,626.23 ಅಂಕಗಳಿಗೆ ಕುಸಿತವಾಗಿದ್ದರೆ, ನಿಫ್ಟಿ 96.55 ಅಂಕಗಳ ಕುಸಿತದೊಂದಿಗೆ 25,327.05 ಅಂಕಗಳಿಗೆ ಇಳಿಕೆಯಾಗಿ ದಿನದ ಮತ್ತು ವಾರದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಐಟಿ ಮತ್ತು ಕೈಗಾರಿಕಾ ವಲಯಗಳ ಷೇರುಗಳು ಲಾಭಾಂಶ ಗಳಿಸಿವೆ. ಬ್ಯಾಕಿಂಗ್ ಕ್ಷೇತ್ರದ ಷೇರುಗಳು ನಷ್ಟ ಅನುಭವಿಸಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಅದಾನಿ ಪೋರ್ಟ್ಸ್, ಭಾರ್ತಿ ಏರ್‌ಟೆಲ್, ಎಸ್‌ಬಿಐ, ಎನ್‌ಟಿಪಿಸಿ ಮತ್ತು ಸನ್ ಫಾರ್ಮಾ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಎಚ್‌ಸಿಎಲ್ ಟೆಕ್, ಐಸಿಐಸಿಐ ಬ್ಯಾಂಕ್, ಟೈಟಾನ್, ಟ್ರೆಂಟ್, ಕೋಟಕ್ ಮಹೀಂದ್ರಾ ಬ್ಯಾಂಕ್, ಹಿಂದೂಸ್ತಾನ್ ಯೂನಿಲಿವರ್, ಮಹೀಂದ್ರಾ & ಮಹೀಂದ್ರಾ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
Advertisement