
ಮುಂಬೈ: ಸತತ 2ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಅಲ್ಪ ಇಳಿಕೆ ಕಂಡಿದ್ದು, ಮಂಗಳವಾರ ಷೇರುಮಾರುಕಟ್ಟೆ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.070ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.13ರಷ್ಟು ಇಳಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು 57.87ಅಂಕಗಳ ಇಳಿಕೆಯೊಂದಿಗೆ 82,102.10 ಅಂಕಗಳಿಗೆ ಕುಸಿತವಾಗಿದ್ದರೆ, ನಿಫ್ಟಿ 32.85 ಅಂಕಗಳ ಇಳಿಕೆಯೊಂದಿಗೆ 23,163.10 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಬ್ಯಾಂಕಿಂಗ್ ಕ್ಷೇತ್ರ ಐಟಿ, ಬಂಡವಾಳ ಸರಕುಗಳು ಮತ್ತು ಕೈಗಾರಿಕಾ ವಲಯಗಳ ಷೇರುಗಳ ಮೌಲ್ಯದಲ್ಲಿ ಬದಲಾವಣೆ ಕಂಡುಬಂದಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಜೆಎಸ್‌ಡಬ್ಲ್ಯೂ ಸ್ಟೀಲ್, ಇಂಡಸ್‌ಇಂಡ್ ಬ್ಯಾಂಕ್ ಮತ್ತು ಬಜಾಜ್ ಫೈನಾನ್ಸ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಟ್ರೆಂಟ್ ಮತ್ತು ಅಲ್ಟ್ರಾಟೆಕ್ ಸಿಮೆಂಟ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
Advertisement