ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಹೆಚ್ಚಳ? ಪೆಟ್ರೋಲಿಯಂ ಸಚಿವಾಲಯ ಹೇಳಿದ್ದೇನು?

ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 120 ಡಾಲರ್‌ಗಳ ಹತ್ತಿರದಲ್ಲಿದೆ ಎಂಬ ಆಧಾರದ ಮೇಲೆ ಕೋಟಕ್, ಲೀಟರ್‌ಗೆ 25-28 ರೂ.ಗಳಷ್ಟು ಬೆಲೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.
No plan yet to raise petrol, diesel prices: Oil Ministry
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ತಕ್ಷಣವೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25-28 ರೂ.ಗಳಷ್ಟು ಹೆಚ್ಚಿಸಬಹುದು ಎಂದು ಹೇಳಲಾಗುತ್ತಿದೆ. ಆದರೆ ಈ ಎಲ್ಲಾ ವರದಿಗಳನ್ನು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು, ಅಂತಹ ಯಾವುದೇ ಬೆಲೆ ಏರಿಕೆ ಪ್ರಸ್ತಾಪ ಸರ್ಕಾರದ ಮುಂದೆ ಎಂದು ಹೇಳಿದೆ.

"ಚುನಾವಣೆ ಮುಗಿದ ತಕ್ಷಣವೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಅಂತಹ ಯಾವುದೇ ಪ್ರಸ್ತಾಪವು ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಲಾಗಿದೆ" ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ X ನಲ್ಲಿ ಪೋಸ್ಟ್‌ ಮಾಡಿದೆ.

ಪಶ್ಚಿಮ ಬಂಗಾಳದಲ್ಲಿ ಮಾತ್ರ ಎರಡು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಏಪ್ರಿಲ್ 29 ರಂದು ಎರಡನೇ ಮತ್ತು ಕೊನೆಯ ಹಂತದ ಚುನಾವಣೆ ಮುಗಿದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ತೀವ್ರ ಏರಿಕೆಯಾಗುವ ಬಗ್ಗೆ ಕೋಟಕ್ ಇನ್ಸ್ಟಿಟ್ಯೂಷನಲ್ ಈಕ್ವಿಟೀಸ್ ವರದಿ ಸುಳಿವು ನೀಡಿದ ನಂತರ ಕೇಂದ್ರ ಈ ಸ್ಪಷ್ಟೀಕರಣ ನೀಡಿದೆ.

No plan yet to raise petrol, diesel prices: Oil Ministry
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದಿಂದ 15 ದಿನಕ್ಕೊಮ್ಮೆ 7000 ಕೋಟಿ ರೂ ಆದಾಯ ನಷ್ಟ!

ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 120 ಡಾಲರ್‌ಗಳ ಹತ್ತಿರದಲ್ಲಿದೆ ಎಂಬ ಆಧಾರದ ಮೇಲೆ ಕೋಟಕ್, ಲೀಟರ್‌ಗೆ 25-28 ರೂ.ಗಳಷ್ಟು ಬೆಲೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಅಂತಹ ವರದಿಗಳು "ನಾಗರಿಕರಲ್ಲಿ ಭಯ ಮತ್ತು ಭೀತಿಯನ್ನು ಸೃಷ್ಟಿಸುವ ಉದ್ದೇಶ ಹೊಂದಿವೆ. ಇದು ದುರುದ್ದೇಶಪೂರಿತ ಮತ್ತು ದಾರಿತಪ್ಪಿಸುವಂತಿದೆ" ಎಂದು ಸಚಿವಾಲಯ ಹೇಳಿದೆ.

"ವಾಸ್ತವವಾಗಿ, ಕಳೆದ ನಾಲ್ಕು ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗದ ಏಕೈಕ ದೇಶ ಭಾರತ" ಎಂದು ಕೇಂದ್ರ ಸರ್ಕಾರ ತಿಳಿಸಿದೆ.

"ಅಂತರರಾಷ್ಟ್ರೀಯ ಬೆಲೆಗಳಲ್ಲಿನ ತೀವ್ರ ಏರಿಕೆಯಿಂದ ಭಾರತೀಯ ನಾಗರಿಕರನ್ನು ರಕ್ಷಿಸಲು ಭಾರತ ಸರ್ಕಾರ ಮತ್ತು ಸಾರ್ವಜನಿಕ ವಲಯದ ತೈಲ ಕಂಪನಿಗಳು ನಿರಂತರ ಕ್ರಮಗಳನ್ನು ತೆಗೆದುಕೊಂಡಿವೆ" ಎಂದು ಸಚಿವಾಲಯ ಹೇಳಿದೆ.

ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ಮಾಡಿದ ನಂತರ ಅಂತರರಾಷ್ಟ್ರೀಯ ತೈಲ ಬೆಲೆಗಳು ಏರಿಕೆಯಾಗಿವೆ.

ಇರಾನ್ ಯುದ್ಧದ ನಂತರ, ತೈಲ ಬೆಲೆಗಳು ಬ್ಯಾರೆಲ್‌ಗೆ ಸುಮಾರು 70 ಡಾಲರ್ ನಿಂದ ರಿಂದ 119 ಡಾಲರ್ ಗೆ ಏರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com