

ಮುಂಬೈ: ಸತತ 5ನೇ ದಿನಗಳ ಕುಸಿತ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಕೊನೆಗೂ ಚೇತರಿಕೆ ಕಂಡಿದ್ದು, ಸೋಮವಾರ ಷೇರುಮಾರುಕಟ್ಟೆಯ ಸೂಚ್ಯಂಕಗಳು ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಸೋಮವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.36ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.42ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು 301.93ಅಂಕಗಳ ಏರಿಕೆಯೊಂದಿಗೆ 83,878.17 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 106.95 ಅಂಕಗಳ ಏರಿಕೆಯೊಂದಿಗೆ 25,790.25 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಇಂಧನ, ಬ್ಯಾಂಕಿಂಗ್, ಲೋಹ ವಲಯಗಳ ಷೇರುಗಳು ಉತ್ತಮ ವಹಿವಾಟು ನಡೆಸಿ ಲಾಭಾಂಶ ಗಳಿಸಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಟಾಟಾ ಸ್ಟೀಲ್, ಏಷ್ಯನ್ ಪೇಂಟ್ಸ್, ಟ್ರೆಂಟ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಹಿಂದೂಸ್ತಾನ್ ಯೂನಿಲಿವರ್, ಅಲ್ಟ್ರಾಟೆಕ್ ಸಿಮೆಂಟ್, ಐಸಿಐಸಿಐ ಬ್ಯಾಂಕ್ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ.
ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಮತ್ತು ವಿದೇಶಿ ನಿಧಿಯ ನಿರಂತರ ಹೊರಹರಿವು ತೀವ್ರ ಲಾಭವನ್ನು ಮಿತಿಗೊಳಿಸಿತು ಎಂದು ತಜ್ಞರು ಹೇಳಿದ್ದಾರೆ.
Advertisement