Indian Stock Market ಭರ್ಜರಿ ವಹಿವಾಟು; Sensex 888 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty50

ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.1.16ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.1.10ರಷ್ಟು ಏರಿಕೆ ದಾಖಲಿಸಿದೆ.
Indian Stock Market
ಭಾರತೀಯ ಷೇರು ಮಾರುಕಟ್ಟೆ
Updated on

ಮುಂಬೈ: ಭಾರತೀಯ ಷೇರುಮಾರುಕಟ್ಟೆ ಬುಧವಾರ ಭರ್ಜರಿ ಏರಿಕೆ ಕಂಡಿದ್ದು, ಷೇರುಮಾರುಕಟ್ಟೆ ಉಭಯ ಸೂಚ್ಯಂಕಗಳು ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಬುಧವಾರ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.1.16ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.1.10ರಷ್ಟು ಏರಿಕೆ ದಾಖಲಿಸಿದೆ.

ಸೆನ್ಸೆಕ್ಸ್ ಇಂದು ಬರೊಬ್ಬರಿ 888.68ಅಂಕಗಳ ಏರಿಕೆಯೊಂದಿಗೆ 77,654.60 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 264.8 ಅಂಕಗಳ ಏರಿಕೆಯೊಂದಿಗೆ 24,250.20 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಐಟಿ, ಮೆಟಲ್ ಮತ್ತು ಆಯ್ದ ಗ್ರಾಹಕ ವಲಯಗಳ ಷೇರುಗಳು ಉತ್ತಮ ವಹಿವಾಟು ನಡೆಸಿ ಲಾಭಾಂಶ ಗಳಿಸಿವೆ.

Indian Stock Market
ಐಫೋನ್‌ಗಳ ಅಬ್ಬರ: ಭಾರತದ ಸ್ಮಾರ್ಟ್‌ಫೋನ್ ರಫ್ತು 10 ಬಿಲಿಯನ್ ಡಾಲರ್; 'ಮೇಕ್ ಇನ್ ಇಂಡಿಯಾ'ಗೆ ಜಾಗತಿಕ ಮನ್ನಣೆ

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಇನ್ಫೋಸಿಸ್, ಲಾರ್ಸೆನ್ & ಟೂಬ್ರೊ, ಹಿಂದೂಸ್ತಾನ್ ಯೂನಿಲಿವರ್, HDFC ಬ್ಯಾಂಕ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಟೆಕ್ ಮಹೀಂದ್ರಾ, ಭಾರ್ತಿ ಏರ್‌ಟೆಲ್ ಮತ್ತು HCL ಟೆಕ್ ಷೇರುಗಳು ಲಾಭಾಂಶ ಕಂಡಿದೆ.

ಅಂತೆಯೇ ಇಂಟರ್ ಗ್ಲೋಬ್ ಏವಿಯೇಷನ್, ಭಾರತ್ ಎಲೆಕ್ಟ್ರಾನಿಕ್ಸ್, ಪವರ್ ಗ್ರಿಡ್ ಮತ್ತು ಆಕ್ಸಿಸ್ ಬ್ಯಾಂಕ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.

ಕೈಗಾರಿಕಾ ಉತ್ಪಾದನೆಯಲ್ಲಿ ಶೇ.7.3ರಷ್ಟು ಬೆಳವಣಿಗೆ

ಜೂನ್ ತಿಂಗಳಲ್ಲಿ ಭಾರತದ ಕೈಗಾರಿಕಾ ಉತ್ಪಾದನಾ ಸೂಚ್ಯಂಕ (IIP) ವಾರ್ಷಿಕ ಆಧಾರದಲ್ಲಿ 7.3 ಶೇಕಡಾ ಬೆಳವಣಿಗೆ ದಾಖಲಿಸಿದೆ. ಮೇ ತಿಂಗಳಲ್ಲಿ ಇದು 5 ಶೇಕಡಾ ಇತ್ತು.

ಉತ್ಪಾದನಾ (Manufacturing) ವಲಯ 7.8 ಶೇಕಡಾ ಬೆಳವಣಿಗೆ ಕಂಡಿದೆ. ವಿದ್ಯುತ್ ಮತ್ತು ಅನಿಲ (Electricity & Gas) ಉತ್ಪಾದನೆ 10.6 ಶೇಕಡಾ ಏರಿಕೆಯಾಗಿದೆ. ಈ ಅಂಕಿಅಂಶಗಳು ದೇಶದ ಆರ್ಥಿಕ ಚಟುವಟಿಕೆಗಳು ಉತ್ತಮ ಸ್ಥಿತಿಯಲ್ಲಿರುವುದನ್ನು ಸೂಚಿಸುತ್ತವೆ.

ಇವಿ ವಾಹನಗಳಿಗೆ ಹರಿಯಾಣ ಸರ್ಕಾರದ ಬಂಪರ್ ರಿಯಾಯಿತಿ

ಇದೇ ವೇಳೆ, ಹರಿಯಾಣ ಸರ್ಕಾರ ಎಲೆಕ್ಟ್ರಿಕ್ ವಾಹನಗಳ (EV) ಖರೀದಿಗೆ ಉತ್ತೇಜನ ನೀಡುವ ಮಹತ್ವದ ನಿರ್ಧಾರ ಪ್ರಕಟಿಸಿದೆ. 30 ಲಕ್ಷ ರೂ ವರೆಗಿನ ಹೊಸ ಎಲೆಕ್ಟ್ರಿಕ್ ವಾಹನಗಳಿಗೆ ಮೋಟಾರು ವಾಹನ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ನೀಡಲಾಗುತ್ತದೆ.

30 ಲಕ್ಷ ರೂಗಿಂತ ಹೆಚ್ಚು ಬೆಲೆಯ ಇವಿ ವಾಹನಗಳಿಗೆ 50 ಶೇಕಡಾ ತೆರಿಗೆ ರಿಯಾಯಿತಿ ಘೋಷಿಸಲಾಗಿದೆ. ಈ ಕ್ರಮದಿಂದ ಇವಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ತಯಾರಕರು, ಸಾಮಾನ್ಯ ಗ್ರಾಹಕರಿಗೆ ಕಾರು ತಯಾರಿಸುವ ಎಲೆಕ್ಟ್ರಿಕ್ ವಾಹನ ಕಂಪನಿಗಳು ಹಾಗೂ ಚಾರ್ಜಿಂಗ್ ಮೂಲಸೌಕರ್ಯ ಕ್ಷೇತ್ರಕ್ಕೆ ಅನುಕೂಲವಾಗುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com