ಗಾಯದ ಮೇಲೆ ಬರೆ: ವಾಣಿಜ್ಯ LPG ಸಿಲಿಂಡರ್ ದರ ರೂ.993 ಏರಿಕೆ, ಹೊಸ ದರ ಇಂದಿನಿಂದ ಜಾರಿ..!

ಬೆಲೆ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್‌ಗಳು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ನೇರ ಆರ್ಥಿಕ ಪರಿಣಾಮ ಬೀರಲಿದ್ದು, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.
Representative image
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಇರಾನ್-ಇಸ್ರೇಲ್ ಬಿಕ್ಕಟ್ಟಿನ ಬಳಿಕ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಸಿಗೋದೇ ಕಷ್ಟ ಕಷ್ಟವಾಗುತ್ತಿದ್ದು, ಈಗಲೂ ಪರಿಸ್ಥಿತಿ ಹಾಗೆಯೇ ಮುಂದುವರಿದಿದೆ. ಇದರ ನಡುವೆಯೇ ಜನಸಾಮಾನ್ಯರಿಗೆ ಮತ್ತೊಂದು ಹೊರೆ ಎನ್ನುವಂತೆ ಮೇ 1ರಿಂದ ವಾಣಿಜ್ಯ ಅನಿಲ (LPG) ಸಿಲಿಂಡರ್ ಬೆಲೆ ಏರಿಕೆಯಾಗಿದೆ.

ಮೇ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಬರೊಬ್ಬರಿ ರೂ.993 ರಷ್ಟು ಹೆಚ್ಚಳ ಮಾಡಲಾಗಿದ್ದು, ಇದರೊಂದಿಗೆ ಬೆಂಗಳೂರು ಸೇರಿದಂತೆ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.3,071.50 ತಲುಪಿದೆ.

ಇಂಧನ ಕಂಪನಿಗಳ ಪ್ರಕಾರ, ಇತ್ತೀಚಿನ ಜಾಗತಿಕ ತೈಲ ಮತ್ತು ಅನಿಲ ಮಾರುಕಟ್ಟೆಯ ಅಸ್ಥಿರತೆ, ಸರಬರಾಜು ಸರಪಳಿಯ ವೆಚ್ಚ ಏರಿಕೆ ಹಾಗೂ ವಿನಿಮಯ ದರದ ಪರಿಣಾಮದಿಂದ ಈ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಬೆಲೆ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್‌ಗಳು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ನೇರ ಆರ್ಥಿಕ ಪರಿಣಾಮ ಬೀರಲಿದ್ದು, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.

ವಾಣಿಜ್ಯ ಸಿಲಿಂಡರ್ ಬೆಲೆ ಗಗನಕ್ಕೇರಿದ್ದರೂ, 14.2 ಕೆಜಿ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆಯಾಗಿಲ್ಲ. ಸರ್ಕಾರದ ಸಬ್ಸಿಡಿ ಹಾಗೂ ನಿಯಂತ್ರಣ ವ್ಯವಸ್ಥೆಯ ಕಾರಣದಿಂದ ಗೃಹ ಬಳಕೆಯ ಗ್ಯಾಸ್ ದರ ಸ್ಥಿರವಾಗಿಯೇ ಮುಂದುವರಿದಿದೆ.

Representative image
ವಾಣಿಜ್ಯ LPG ಸಿಲಿಂಡರ್ ಪೂರೈಕೆ ಶೇ 68ರಷ್ಟು ಹೆಚ್ಚಳ: ಆದ್ಯತೆಗನುಗುಣವಾಗಿ ಹಂಚಿಕೆ..!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com