ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ; ದರ 1,053 ರೂ.ದೇಶದ ಪ್ರಮುಖ ನಗರಗಳಲ್ಲಿ ಜುಲೈ 06ರಿಂದ ಜಾರಿಗೆ ಬರುವಂತೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ.
ಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸೇವಾ ಶುಲ್ಕ ಸೇರಿಸುವಂತಿಲ್ಲ: ಸಿಸಿಪಿಎ ಆದೇಶಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸ್ವಯಂಚಾಲಿತವಾಗಿ ಸೇವಾ ಶುಲ್ಕ ವಿಧಿಸದಂತೆ ಕೇಂದ್ರೀಯ ಗ್ರಾಹಕರ ರಕ್ಷಣಾ ಪ್ರಾಧಿಕಾರ ಸೋಮವಾರ ಆದೇಶ ಹೊರಡಿಸಿದೆ. ಒಂದು ವೇಳೆ ಈ ಆದೇಶ ಉಲ್ಲಂಘನೆಯಾದಲ್ಲಿ ಗ್ರಾಹಕರು ದೂರು ದಾಖಲಿಸಲು ಅವಕಾಶ ನೀಡಿದೆ.
ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 198 ರೂಪಾಯಿ ಇಳಿಕೆಹೋಟೆಲ್ಗಳು, ರೆಸ್ಟೊರೆಂಟ್ಗಳು ಮತ್ತು ಇತರ ವ್ಯಾಪಾರ ಸಂಸ್ಥೆಗಳು ಬಳಸುವ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಶುಕ್ರವಾರ 198 ರೂಪಾಯಿ ಕಡಿತಗೊಳಿಸಲಾಗಿದೆ.
ಜಿಎಸ್ ಟಿ ಸಂಗ್ರಹ ಜೂನ್ ನಲ್ಲಿ ಶೇ.56 ರಷ್ಟು ಏರಿಕೆ, 1.44 ಲಕ್ಷ ಕೋಟಿ ರೂ. ಸಂಗ್ರಹ: ನಿರ್ಮಲಾ ಸೀತಾರಾಮನ್ಜೂನ್ ನಲ್ಲಿ ಸಂಗ್ರಹವಾದ ಜಿಎಸ್ ಟಿ ಆದಾಯ, ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಕೆ ಮಾಡಿದರೆ ಶೇ.56 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಚಿನ್ನ ಆಮದು ಸುಂಕ ಶೇ.15 ರಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರಹಳದಿ ಲೋಹದ ಆಮದು ಸುಂಕ ಏರಿಕೆಯಾಗಿದೆ. ಚಿನ್ನದ ಮೇಲಿನ ಆಮದು ಸುಂಕವನ್ನು ಶೇ. 10.75 ರಿಂದ ಶೇ. 15ಕ್ಕೆ ಕೇಂದ್ರ ಸರ್ಕಾರ ಹೆಚ್ಚಿಸಿದೆ. ಇದು ಜೂನ್ 30 ರಿಂದ ಜಾರಿಗೆ ಬಂದಿದೆ.
ಪೆಟ್ರೋಲ್, ಡೀಸೆಲ್ ಮೇಲೆ ರಫ್ತು ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ; ಸ್ಥಳೀಯ ಕಚ್ಚಾ ತೈಲದ ಮೇಲೆ ಅನಿರೀಕ್ಷಿತ ತೆರಿಗೆರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನಂತಹ ಸಂಸ್ಥೆಗಳು ವಿದೇಶಕ್ಕೆ ಸಾಗಿಸುವ ಪೆಟ್ರೋಲ್, ಡೀಸೆಲ್ ಮತ್ತು ಜೆಟ್ ಇಂಧನ (ಎಟಿಎಫ್) ಮೇಲೆ ಕೇಂದ್ರ ಸರ್ಕಾರ ರಫ್ತು ತೆರಿಗೆ ವಿಧಿಸಿದೆ.
ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ, ಪರಿಷ್ಕೃತ ದರ ಇಂದಿನಿಂದ ಜಾರಿ, ನೂತನ ದರ ಹೀಗಿದೆ...ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಜುಲೈ 1 ಶುಕ್ರವಾರ 198 ರೂಪಾಯಿ ಇಳಿಕೆಯಾಗಿದೆ. ಇದೀಗ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿಕೆಯಾಗಿದೆ. ಈ ಹಿಂದೆ ಇದರ ಬೆಲೆ 2,219 ರೂಪಾಯಿಯಾಗಿತ್ತು.
ಡಾಲರ್ ಎದುರು ಇತರ ಜಾಗತಿಕ ಕರೆನ್ಸಿಗಳಿಗಿಂತ ರೂಪಾಯಿ ಮೌಲ್ಯ ತುಲನಾತ್ಮಕವಾಗಿ ಉತ್ತಮ: ನಿರ್ಮಲಾ ಸೀತಾರಾಮನ್ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವಂತೆಯೇ, ಡಾಲರ್ ಎದುರು ಇತರ ಜಾಗತಿಕ ಕರೆನ್ಸಿಗಳಿಗಿಂತ ರೂಪಾಯಿ ಮೌಲ್ಯ ತುಲನಾತ್ಮಕವಾಗಿ ಉತ್ತಮವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.
ಜಿಎಸ್ ಟಿ ಕೌನ್ಸಿಲ್ ಸಭೆ: ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ವಿಸ್ತರಿಸುವ ಬಗ್ಗೆ ಯಾವುದೇ ನಿರ್ಧಾರವಿಲ್ಲಜಿಎಸ್ಟಿ ಜಾರಿಯಿಂದಾಗಿ ಆರ್ಥಿಕ ನಷ್ಟ ಅನುಭವಿಸುತ್ತಿರುವ ರಾಜ್ಯಗಳಿಗೆ ಪಾವತಿಸುವ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಬುಧವಾರ ನಡೆದ ಜಿಎಸ್ಟಿ ಕೌನ್ಸಿಲ್ ಸಭೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ರಿಲಾಯನ್ಸ್ ರೀಟೇಲ್ ಗೆ ಮುಖೇಶ್ ಅಂಬಾನಿ ಪುತ್ರಿ ಇಶಾ ನೂತನ ಅಧ್ಯಕ್ಷ್ಯೆ!ಮುಖೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಅವರು ರಿಲಾಯನ್ಸ್ ರೀಟೇಲ್ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.
ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ: ಮೊದಲ ಬಾರಿಗೆ ಪ್ರತಿ ಡಾಲರ್ ಬೆಲೆ 79 ರೂ.!ಭಾರತೀಯ ಷೇರುಮಾರುಕಟ್ಟೆ ವಹಿವಾಟು ಕುಸಿತದ ಬೆನ್ನಲ್ಲೇ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದ್ದು, ಪ್ರತೀ ಡಾಲರ್ ಎದುರು ಇದೇ ಮೊದಲ ಬಾರಿಗೆ 79 ರೂಗಳಿಗಿಂತ ಕೆಳಗೆ ಕುಸಿದಿದೆ.
ಜಿಎಸ್ ಟಿ ಜಾರಿಗೆ ಬಂದು ನಾಳೆಗೆ 5 ವರ್ಷ: ಇನ್ನೂ ಸುಲಭವಾಗದ ಸರಳ ತೆರಿಗೆ ಪದ್ಧತಿಕೇಂದ್ರ, ರಾಜ್ಯ ಮತ್ತು ಸ್ಥಳೀಯ ತೆರಿಗೆಯನ್ನು ವಿಧಿಸುವ ಹಿಂದಿನ ಕಾರ್ಯವಿಧಾನವನ್ನು ಸರಳಗೊಳಿಸಲು ಹೊಸ ಪರೋಕ್ಷ ತೆರಿಗೆ ವ್ಯವಸ್ಥೆಯೇ ಜಿಎಸ್ ಟಿ. ತರಾತುರಿಯಲ್ಲಿ ಜಾರಿಗೆ ತಂದ ಜಿಎಸ್ ಟಿಯಲ್ಲಿ ಹಲವು ನ್ಯೂನತೆಗಳಿದ್ದವು. ಕೆಲವು ನ್ಯೂನತೆಗಳನ್ನು ಇನ್ನೂ ಸರಿಪಡಿಸಬೇಕಾಗಿದೆ.
ರಿಲಯನ್ಸ್ ಜಿಯೋಗೆ ಮುಖೇಶ್ ಅಂಬಾನಿ ರಾಜೀನಾಮೆ, ಮಗ ಆಕಾಶ್ ನೂತನ ಅಧ್ಯಕ್ಷರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಮುಖೇಶ್ ಅಂಬಾನಿ ಅವರು ತಮ್ಮ ಸಮೂಹದ ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋ ಮಂಡಳಿಗೆ ರಾಜೀನಾಮೆ ನೀಡಿದ್ದು, ಜಿಯೋ ಕಂಪನಿಯ ಆಡಳಿತವನ್ನು...
2022ರ ಮೊದಲ ತ್ರೈಮಾಸಿಕ ಭಾರತದಲ್ಲಿ ಮೊಬೈಲ್ ಮೂಲಕ 44.68 ಲಕ್ಷ ಕೋಟಿ ರೂಪಾಯಿ ವಹಿವಾಟು!ಭಾರತದಲ್ಲಿ ಅಂತರ್ಜಾಲ ಬಳಕೆದಾರರ ಸಂಖ್ಯೆ ಹೆಚ್ಚಾಗಿದ್ದು, ಮೊಬೈಲ್ ಮೂಲಕ ನಡೆಸುವ ವಹಿವಾಟುಗಳ ಸಂಖ್ಯೆಯೂ ಏರಿಕೆಯಾಗತೊಡಗಿವೆ.
ಮಧ್ಯಮ ಮತ್ತು ಸಣ್ಣ ಉದ್ಯಮ ವಲಯ: ಕಳೆದ 8 ವರ್ಷಗಳಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಶೇ.13ರಷ್ಟು ಮಾತ್ರ ಏರಿಕೆ!ಮಧ್ಯಮ ಮತ್ತು ಸಣ್ಣ ಉದ್ಯಮ ವಲಯದಲ್ಲಿನ ಲಿಂಗ ಅಸಮಾನತೆ ಇದೆ ಎಂಬುದು ವಾರ್ಷಿಕ ವರದಿಗಳ ಮಾಹಿತಿಯಿಂದ ತಿಳಿದುಬಂದಿದೆ. ಪ್ರತಿ ವರ್ಷದ ಕೊನೆಯಲ್ಲಿ ಈ ವಾರ್ಷಿಕ ವರದಿಗಳನ್ನು ಬಿಡುಗಡೆ ಮಾಡಲಾಗುತ್ತದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!