ಅಮೆಜಾನ್ ಸಿಇಒ ಸ್ಥಾನದಿಂದ ಕೆಳಗಿಳಿಯಲಿರುವ ಜೆಫ್ ಬೆಜೋಸ್: ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಮುಂದುವರಿಕೆ
ಅಮೆಜಾನ್ ಇ-ಕಾಮರ್ಸ್ ಸಂಸ್ಥೆಯ ಸಿಇಒ ಸ್ಥಾನಕ್ಕೆ ಜೆಫ್ ಬೆಜೋಸ್ ರಾಜೀನಾಮೆ ನೀಡಲು ಸಜ್ಜಾಗಿದ್ದು, ಮುಂದೆ ತಮ್ಮ ಆದ್ಯತೆ, ಗಮನವನ್ನು ಖಾಸಗಿ ಬಾಹ್ಯಾಕಾಶ ಪರಿಶೋಧನಾ ಸಂಸ್ಥೆ, ಸಾಮಾಜಿಕ ಕೆಲಸಗಳು ಮತ್ತು ಬೇರೆ ಕ್ಷೇತ್ರಗಳಲ್ಲಿ ಮುಂದುವರಿಸಲು ನಿರ್ಧರಿಸಿದ್ದಾರೆ.


