ಬಿ.ಎಸ್ಸಿ ಪದವೀಧರರಿಗೆ ಗುಡ್ ನ್ಯೂಸ್; ಭರ್ಜರಿ ಸಂಬಳದೊಂದಿಗೆ ತೋಟಗಾರಿಕೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನಿಸಿದ KEA

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 85 ಸಹಾಯಕ ತೋಟಗಾರಿಕಾ ಅಧಿಕಾರಿ ಮತ್ತು ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:
Job
ತೋಟಗಾರಿಕೆ ಇಲಾಖೆಯಲ್ಲಿ ನೇಮಕಾತಿOnline Desk
Updated on

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 85 ಸಹಾಯಕ ತೋಟಗಾರಿಕಾ ಅಧಿಕಾರಿ ಮತ್ತು ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ತೋಟಗಾರಿಕೆ ವಿಷಯದಲ್ಲಿ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಆ ಕುರಿತ ವರದಿ ಇಲ್ಲಿದೆ:

ಹುದ್ದೆಗಳ ವಿವರ:

ಒಟ್ಟು 85 ಹುದ್ದೆಗಳು

  • ಸಹಾಯಕ ತೋಟಗಾರಿಕೆ ಅಧಿಕಾರಿ (AHO): 75 ಹುದ್ದೆಗಳು

  • ಸಹಾಯಕ ತೋಟಗಾರಿಕೆ ನಿರ್ದೇಶಕರು (ADH): 10 ಹುದ್ದೆಗಳು (ಸಾಮಾನ್ಯ 5 + ಕಲ್ಯಾಣ ಕರ್ನಾಟಕ 5)

ಅರ್ಹತೆ:

  • ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ತೋಟಗಾರಿಕೆಯಲ್ಲಿ ಬಿ.ಎಸ್ಸಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.

  • ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು (ಸರ್ಕಾರದ ನಿಯಮಾನುಸಾರ SC / ST / ಪ್ರವರ್ಗ-1 5 ವರ್ಷ, ಹಿಂದುಳಿದ ವರ್ಗಗಳು (2A/2B/3A/3B)ಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ).

Job
KPSCಯಿಂದ ಭರ್ಜರಿ ಉದ್ಯೋಗಾವಕಾಶ; 319 KAS ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸರ್ಕಾರ

ಸಂಬಳ:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹65,950 ರಿಂದ ₹1,34,200 ವರೆಗೆ ವೇತನ ಇರಲಿದೆ. (ಇದರೊಂದಿಗೆ DA, HRA ಮತ್ತು ಸಾರಿಗೆ ಭತ್ಯೆಗಳು ಸಿಗಲಿವೆ.)

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 5, 2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 30, 2026

  • ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನ: ಆಗಸ್ಟ್ 31, 2026

ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ವೆಬ್‌ಸೈಟ್ Karnataka Examination Authority ಭೇಟಿ ನೀಡಿ.

  • ಮುಖಪುಟದಲ್ಲಿರುವ ತೋಟಗಾರಿಕೆ ಇಲಾಖೆ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.

  • ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ, ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.

  • ಆನ್‌ಲೈನ್ ಮೂಲಕ ಶುಲ್ಕ ಪಾವತಿಸಿ ಅರ್ಡಿಯನ್ನು ಸಲ್ಲಿಸಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com