ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ; ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಕೆ ಹೇಗೆ?

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
Bank of Baroda
ಬ್ಯಾಂಕ್ ಆಫ್ ಬರೋಡಾ
Updated on

Bank of Baroda Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (BOB) ದೇಶಾದ್ಯಂತ ಒಟ್ಟು 2,482 ಲೋಕಲ್ ಬ್ಯಾಂಕ್ ಆಫೀಸರ್ (Local Bank Officer - LBO) ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಅದರಲ್ಲೂ ವಿಶೇಷವೆಂದರೆ, 2,482 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಪೈಕಿ 418 ಹುದ್ದೆಗಳು ಕರ್ನಾಟಕ ಒಂದರಲ್ಲೇ ಲಭ್ಯವಿವೆ. ಹಾಗಾಗಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಇದು ಸುವರ್ಣ ಅವಕಾಶವಾಗಿದೆ. ಆ ಕುರಿತ ವರದಿ ಇಲ್ಲಿದೆ:

ನೇಮಕಾತಿ ವಿವರ:

  • ಹುದ್ದೆಯ ಹೆಸರು: ಲೋಕಲ್ ಬ್ಯಾಂಕ್ ಆಫೀಸರ್ (Local Bank Officer - LBO)

  • ಒಟ್ಟು ಹುದ್ದೆಗಳು: 2,482 (ಕರ್ನಾಟಕ ಒಂದರಲ್ಲೇ418 ಹುದ್ದೆಗಳು (130 ಹೊಸ ಹುದ್ದೆಗಳು + 288 ಹಿಂದಿನ ಬಾಕಿ ಹುದ್ದೆಗಳು))

ಅರ್ಹತೆಗಳು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:

  • ಶೈಕ್ಷಣಿಕ ಅರ್ಹತೆ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಾಸ್ ಆಗಿರಬೇಕು.

  • ಬ್ಯಾಂಕಿಂಗ್ ಅನುಭವ (ಕಡ್ಡಾಯ): ಯಾವುದೇ ಶೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್‌ನಲ್ಲಿ ಆಫೀಸರ್ ಕೇಡರ್‌ನಲ್ಲಿ ಕನಿಷ್ಠ 1 ವರ್ಷದ ಕೆಲಸದ ಅನುಭವ ಹೊಂದಿರಬೇಕು. (ಇದು ಫ್ರೆಶರ್ಸ್‌ಗಾಗಿ ಇರುವ ಹುದ್ದೆಯಲ್ಲ).

  • ಸ್ಥಳೀಯ ಭಾಷಾ ಜ್ಞಾನ: ಅಭ್ಯರ್ಥಿಗಳು ಯಾವ ರಾಜ್ಯಕ್ಕೆ ಅರ್ಜಿ ಸಲ್ಲಿಸುತ್ತಾರೋ ಆ ರಾಜ್ಯದ ಸ್ಥಳೀಯ ಭಾಷೆ ಗೊತ್ತಿರಬೇಕು. ಕರ್ನಾಟಕಕ್ಕೆ ಅರ್ಜಿ ಸಲ್ಲಿಸುವವರಿಗೆ ಕನ್ನಡ ಭಾಷೆಯ ಪ್ರಾವೀಣ್ಯತೆ ಕಡ್ಡಾಯವಾಗಿದೆ.

  • ವಯೋಮಿತಿ: 01 ಆಗಸ್ಟ್ 2026 ಕ್ಕೆ ಅನ್ವಯಿಸುವಂತೆ ಕನಿಷ್ಠ ವಯಸ್ಸು: 21 ವರ್ಷ, ಗರಿಷ್ಠ ವಯಸ್ಸು: 30 ವರ್ಷ (ಸರ್ಕಾರದ ನಿಯಮಗಳ ಪ್ರಕಾರ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ).

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 18 ಆಗಸ್ಟ್ 2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ಸೆಪ್ಟೆಂಬರ್ 2026

  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: 07 ಸೆಪ್ಟೆಂಬರ್ 2026

ಸಂಬಳ:

  • ಆಯ್ಕೆಯಾದ ಸ್ಥಳೀಯ ಬ್ಯಾಂಕ್ ಅಧಿಕಾರಿಗಳಿಗೆ (JMG/Scale-I) ಪ್ರತಿ ತಿಂಗಳು ₹48,480 ರಿಂದ ₹85,920 ವರೆಗೆ ಆಕರ್ಷಕ ಸಂಬಳ ಹಾಗೂ ಬ್ಯಾಂಕಿನ ನಿಯಮಾವಳಿಗಳ ಪ್ರಕಾರ ಇತರ ಭತ್ಯೆಗಳು ಸಿಗಲಿವೆ.

  • ಇದರೊಂದಿಗೆ, 1 ವರ್ಷದ ಪ್ರೊಬೇಷನ್ ಅವಧಿ ಇರಲಿದ್ದು, ಕನಿಷ್ಠ 3 ವರ್ಷಗಳ ಸೇವಾ ಬಾಂಡ್ ಇರುತ್ತದೆ. ಮೊದಲ 12 ವರ್ಷಗಳ ಕಾಲ ಆಯ್ಕೆಯಾದ ರಾಜ್ಯದಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶವಿದೆ.

Bank of Baroda
SSLC ಪಾಸಾಗಿರುವ ಮಹಿಳೆಯರಿಗೆ ಗುಡ್ ನ್ಯೂಸ್; ಯಾವುದೇ ಪರೀಕ್ಷೆ ಇಲ್ಲದೆ ಕೆಲಸ; ಭಾರತೀಯ ಅಂಚೆ ಇಲಾಖೆಯಿಂದ ಪೋಸ್ಟಲ್ ಸಖಿ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ:

  • ಸಾಮಾನ್ಯ (General), OBC ಮತ್ತು EWS ಅಭ್ಯರ್ಥಿಗಳಿಗೆ: ₹850

  • SC, ST ಮತ್ತು ಅಂಗವಿಕಲ (PWD) ಅಭ್ಯರ್ಥಿಗಳಿಗೆ: ₹100

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಈ ಕೆಳಗಿನ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:

  • ಆನ್‌ಲೈನ್ ಲಿಖಿತ ಪರೀಕ್ಷೆ

  • ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನ

  • ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ (ಸ್ಥಳೀಯ ಭಾಷಾ ಪರೀಕ್ಷೆ (LPT): 10ನೇ ಅಥವಾ 12ನೇ ತರಗತಿಯಲ್ಲಿ ಸ್ಥಳೀಯ ಭಾಷೆಯನ್ನು ಒಂದು ವಿಷಯವಾಗಿ ಅಭ್ಯಾಸ ಮಾಡದವರಿಗೆ ಮಾತ್ರ ಈ ಪರೀಕ್ಷೆ ಇರುತ್ತದೆ)

  • ಸೈಕೋಮೆಟ್ರಿಕ್ ಟೆಸ್ಟ್

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ ಆದ bankofbaroda.bank.in ಗೆ ಭೇಟಿ ನೀಡಿ,

  • 'Careers' ವಿಭಾಗದಲ್ಲಿ ಆನ್‌ಲೈನ್ ಮೂಲಕವೇ ಫಾರ್ಮ್ ಭರ್ತಿ ಮಾಡಬೇಕು.

  • ಅರ್ಜಿ ಸಲ್ಲಿಸುವಾಗ ನಿಮ್ಮ ಫೋಟೋ, ಸಹಿ, ರೆಸ್ಯೂಮ್ ಮತ್ತು ಬ್ಯಾಂಕಿಂಗ್ ಅನುಭವದ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ.

Bank of Baroda
ಪದವೀಧರರಿಗೆ ಸುವರ್ಣ ಅವಕಾಶ; ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಿಂದ 250 ಹುದ್ದೆಗಳಿಗೆ ಅರ್ಜಿ ಆಹ್ವಾನ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com