

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೇರ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದೆ.
ಬೆಂಗಳೂರು ಜಲ ಮಂಡಳಿ ನೇರ ನೇಮಕಾತಿ ಅಧಿಸೂಚನೆ ಸಂಖ್ಯೆ:-ಇಡಿ/ಕೆಇಎ/ಆಡಳಿತ/ಸಿ.ಆರ್.25/2025 (ಆರ್‌ಪಿಸಿ) ದಿನಾಂಕ:-15-11-2025 ಮತ್ತು ನೇರ ನೇಮಕಾತಿ ಅಧಿಸೂಚನೆ ಸಂಖ್ಯೆ:-ಇಡಿ/ಕೆಇಎ/ ಆಡಳಿತ/ಸಿ.ಆರ್.26/2025 (ಕಲ್ಯಾಣ ಕರ್ನಾಟಕ) ದಿನಾಂಕ:-15-11-2025ಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಮೂಲ ದಾಖಲಾತಿಗಳ ಪರಿಶೀಲನೆಗೆ ಆಹ್ವಾನಿಸಿದೆ.
ಸದರಿ ಹುದ್ದೆಗಳಿಗೆ ವೃಂದವಾರು ದಾಖಲೆ ಪರಿಶೀಲನೆಯನ್ನು ದಿನಾಂಕ:-06-07-2026 ರಿಂದ 24-07-2026ರವರೆಗೆ ವಿವಿಧ ದಿನಾಂಕಗಳಲ್ಲಿ ನಡೆಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿರುವ ದಿನದಂದು ಪೂರಕ ದಾಖಲಾತಿಗಳೊಂದಿಗೆ ಹಾಜರಾಗಲು ಕೋರಿದೆ.
ದಾಖಲೆ ಪರಿಶೀಲನೆಗೆ ಪರಿಗಣಿಸಲಾಗಿರುವ ಅಭ್ಯರ್ಥಿಗಳ ಪಟ್ಟಿ, ದಿನಾಂಕ, ಸಮಯ, ಸ್ಥಳ ಮತ್ತಿತರ ಮಾಹಿತಿಗೆ ಮಂಡಳಿಯ ಅಧಿಕೃತ ವೆಬ್ ಸೈಟ್ www.bwssb.gov.in ನಲ್ಲಿ ವೀಕ್ಷಿಸಬಹುದಾಗಿದೆ.