

ISRO Recruitment: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರವು ತಾಂತ್ರಿಕ ಮತ್ತು ತಾಂತ್ರಿಕೇತರ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 97 ವಿವಿಧ ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆ ಕುರಿತ ವರದಿ ಇಲ್ಲಿದೆ:
ಹುದ್ದೆಗಳ ವಿವರ:
ಸಂಸ್ಥೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ - ISRO
ಸ್ಥಳ: ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಶ್ರೀಹರಿಕೋಟಾ, ತಿರುಪತಿ ಜಿಲ್ಲೆ, ಆಂಧ್ರಪ್ರದೇಶ
ಒಟ್ಟು ಹುದ್ದೆಗಳು: 97
ತಂತ್ರಜ್ಞ ಬಿ: 43 ಹುದ್ದೆಗಳು
ತಾಂತ್ರಿಕ ಸಹಾಯಕ: 14 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್: 16 ಹುದ್ದೆಗಳು
ವೈಜ್ಞಾನಿಕ ಸಹಾಯಕ: 03 ಹುದ್ದೆಗಳು
ಗ್ರಂಥಾಲಯ ಸಹಾಯಕ ಎ: 03 ಹುದ್ದೆಗಳು
ನರ್ಸ್ ಬಿ: 03 ಹುದ್ದೆಗಳು
ಡ್ರಾಫ್ಟ್‌ಮನ್ ಬಿ: 01 ಹುದ್ದೆ
ಇತರ ಹುದ್ದೆಗಳು: ಫೈರ್‌ಮನ್ ಎ, ವಾಹನ ಚಾಲಕರು ಸೇರಿದಂತೆ ಒಟ್ಟು 24 ಪೋಸ್ಟ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: ಅಕ್ಟೋಬರ್ 19, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 9, 2026 (ರಾತ್ರಿ 11:59 ರವರೆಗೆ)
ಅರ್ಹತೆ:
ಶೈಕ್ಷಣಿಕ ವಿದ್ಯಾರ್ಹತೆ:
ತಾಂತ್ರಿಕ ಹುದ್ದೆಗಳಿಗೆ: SSLC/10ನೇ ತರಗತಿ ಜೊತೆಗೆ ಸಂಬಂಧಪಟ್ಟ ಟ್ರೇಡ್‌ನಲ್ಲಿ ITI ಅಥವಾ ಇಂಜಿನಿಯರಿಂಗ್ ಡಿಪ್ಲೊಮಾ ಪಾಸಾಗಿರಬೇಕು.
ವೈಜ್ಞಾನಿಕ ಮತ್ತು ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ: ಬಿಎಸ್‌ಸಿ (ಭೌತಶಾಸ್ತ್ರ/ಲಲಿತಕಲೆ) ಪದವಿ ಅಥವಾ ಲೈಬ್ರರಿ ಸೈನ್ಸ್‌ನಲ್ಲಿ ಸ್ನಾತಕೋತ್ತರ (PG) ಪದವಿ ಪಡೆದಿರಬೇಕು.
ಇತರ ಹುದ್ದೆಗಳಿಗೆ: 10ನೇ ತರಗತಿ ಹಾಗೂ ಚಾಲನಾ ಹುದ್ದೆಗಳಿಗೆ ಮಾನ್ಯತೆ ಪಡೆದ ಡ್ರೈವಿಂಗ್ ಲೈಸೆನ್ಸ್ ಮತ್ತು ಅನುಭವ ಹೊಂದಿರಬೇಕು.
ವಯೋಮಿತಿ:
ಸಾಮಾನ್ಯ ಹುದ್ದೆಗಳು: ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ.
ಫೈರ್‌ಮ್ಯಾನ್ ಮತ್ತು MTS ಹುದ್ದೆಗಳು: ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ.
ನಿಯಮಾವಳಿಗಳ ಪ್ರಕಾರ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಸಂಬಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಮ್ಯಾಟ್ರಿಕ್ಸ್ ಪ್ರಕಾರ ಮಾಸಿಕ ₹18,000 ರಿಂದ ₹1,42,400 ವರೆಗೆ ಮೂಲ ವೇತನ ಮತ್ತು ನಿಯಮಾವಳಿಗಳ ಪ್ರಕಾರ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಇಸ್ರೋದ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು:
ಇಸ್ರೋ ಶಾರ್ ಅಧಿಕೃತ ಪೋರ್ಟಲ್ SDSC SHAR Recruitment ಗೆ ಭೇಟಿ ನೀಡಿ.
Advertisement No. SDSC SHAR/RMT/03/2026 ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಇಮೇಲ್ ಮತ್ತು ಮೊಬೈಲ್ ಸಂಖ್ಯೆ ಬಳಸಿ ನೋಂದಣಿ ಮಾಡಿಕೊಳ್ಳಿ.
ಅಗತ್ಯವಿರುವ ಶೈಕ್ಷಣಿಕ ದಾಖಲೆಗಳು, ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ, ಆನ್‌ಲೈನ್ ಮೂಲಕ ಶುಲ್ಕ ಪಾವತಿಸಿ ಅರ್ಜಿ ಸಬ್ಮಿಟ್ ಮಾಡಿ.