

SSC Recruitment 2026: ದ್ವಿತೀಯ ಪಿಯುಸಿ ಪಾಸಾಗಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್; ಸಿಬ್ಬಂದಿ ನೇಮಕಾತಿ ಆಯೋಗವು (SSC) ಗ್ರೂಪ್ ‘ಸಿ’ ವೃಂದದಡಿ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಕಚೇರಿಗಳಲ್ಲಿ ಖಾಲಿ ಇರುವ ಒಟ್ಟು 2,536 ಹುದ್ದೆಗಳ ಭರ್ತಿಗಾಗಿ ಹೈಯರ್ ಸೆಕೆಂಡರಿ ಲೆವೆಲ್ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ:
ಹುದ್ದೆಯ ವಿವರ:
ಒಟ್ಟು ಹುದ್ದೆಗಳು: 2,536
ಹುದ್ದೆಯ ಹೆಸರು:
ಕಿರಿಯ ವಿಭಾಗದ ಗುಮಾಸ್ತ
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್
ಡೇಟಾ ಎಂಟ್ರಿ ಆಪರೇಟರ್
ನೇಮಕಾತಿ ಸಂಸ್ಥೆ: ಸಿಬ್ಬಂದಿ ನೇಮಕಾತಿ ಆಯೋಗ (SSC)
ಅರ್ಹತೆ:
ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕಡ್ಡಾಯವಾಗಿ ದ್ವಿತೀಯ ಪಿಯುಸಿ (12ನೇ ತರಗತಿ) ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. (ಗಮನಿಸಿ: ಕೆಲವು ನಿರ್ದಿಷ್ಟ ಇಲಾಖೆಗಳ DEO ಹುದ್ದೆಗಳಿಗೆ ವಿಜ್ಞಾನ ವಿಭಾಗದಲ್ಲಿ ಗಣಿತ ವಿಷಯದೊಂದಿಗೆ ಪಿಯುಸಿ ಮುಗಿಸಿರಬೇಕು).
ವಯೋಮಿತಿ: 1 ಆಗಸ್ಟ್ 2026 ಕ್ಕೆ ಅನ್ವಯಿಸುವಂತೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. (ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇರುತ್ತದೆ)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ: ಸೆಪ್ಟೆಂಬರ್ 7, 2026.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 7, 2026 (ರಾತ್ರಿ 11:00 ಗಂಟೆಯವರೆಗೆ).
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಅಕ್ಟೋಬರ್ 8, 2026.
ಅರ್ಜಿ ತಿದ್ದುಪಡಿ ವಿಂಡೋ (Correction Window): ಅಕ್ಟೋಬರ್ 14 ರಿಂದ ಅಕ್ಟೋಬರ್ 16, 2026
ಅರ್ಜಿ ಶುಲ್ಕ:
ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ ರೂ. 100 ಇರಲಿದೆ. ಜೊತೆಗೆ ಎಸ್‌ಸಿ, ಎಸ್‌ಟಿ, ವಿಕಲಚೇತನರು, ಮಾಜಿ ಸೈನಿಕರು ಮತ್ತು ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಕನ್ನಡದಲ್ಲೂ ಪರೀಕ್ಷೆ: ಈ ಪರೀಕ್ಷೆಯನ್ನು ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡ ಭಾಷೆಯಲ್ಲೂ ಬರೆಯಲು ಅವಕಾಶವಿರುತ್ತದೆ.
ಕರ್ನಾಟಕದ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಮೈಸೂರು, ಮಂಗಳೂರು, ಶಿವಮೊಗ್ಗ, ಉಡುಪಿ, ಹುಬ್ಬಳ್ಳಿ, ಬೆಳಗಾವಿ ಮತ್ತು ಕಲಬುರಗಿ.
ಸಂಬಳ:
LDC / JSA ಹುದ್ದೆಗಳು: ರೂ. 19,900 ರಿಂದ ರೂ. 63,200 (Level-2)
Data Entry Operator (DEO): ರೂ. 25,500 ರಿಂದ ರೂ. 81,100 (Level-4) ಮತ್ತು ಕೆಲವು ಇಲಾಖೆಗಳಲ್ಲಿ ರೂ. 92,300 ರವರೆಗೆ (Level-5) ಇರಲಿದೆ.
ಅರ್ಜಿ ಸಲ್ಲಿಕೆ ವಿಧಾನ:
ಸಿಬ್ಬಂದಿ ನೇಮಕಾತಿ ಆಯೋಗದ (SSC) ಗ್ರೂಪ್ ಸಿ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುಲು ಅಭ್ಯರ್ಥಿಗಳು ಎಸ್‌ಎಸ್‌ಸಿಯ ಹೊಸ ಅಧಿಕೃತ ವೆಬ್‌ಸೈಟ್ ssc.gov.in ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಾಗುತ್ತದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಗಳಾದ ಟಯರ್-1 (Tier-I) ಮತ್ತು ಟಯರ್-2 (Tier-II) ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ಕೊನೆಯಲ್ಲಿ ಟೈಪಿಂಗ್ ಅಥವಾ ಸ್ಕಿಲ್ ಟೆಸ್ಟ್ ಮತ್ತು ದಾಖಲಾತಿ ಪರಿಶೀಲನೆ ಇರುತ್ತದೆ. (ಗಮನಿಸಿ: ಈ ಬಾರಿ ಟಯರ್-1 ಪರೀಕ್ಷೆಯಲ್ಲಿ ಪ್ರತಿ ವಿಷಯಕ್ಕೂ 15 ನಿಮಿಷಗಳ ಸೆಕ್ಷನಲ್ ಟೈಮಿಂಗ್ಸ್ ನಿಯಮವನ್ನು ತರಲಾಗಿದೆ).