

SSC SI Recruitment 2026: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (SSC) ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಖಾಲಿ ಇರುವ ಒಟ್ಟು 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಅದರಲ್ಲೂ, ಕೇಂದ್ರ ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ದೇಶಾದ್ಯಂತ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆ ಕುರಿತ ವರದಿ ಇಲ್ಲಿದೆ:
ಹುದ್ದೆಗಳ ವಿವರ:
ಹುದ್ದೆಯ ಹೆಸರು: ಸಬ್-ಇನ್ಸ್‌ಪೆಕ್ಟರ್
ಒಟ್ಟು ಹುದ್ದೆಗಳು: 1,871 ಹುದ್ದೆಗಳು
ದೆಹಲಿ ಪೊಲೀಸ್ SI: 317 ಹುದ್ದೆಗಳು
ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPFs - BSF, CISF, CRPF, ITBP, SSB) SI (GD): 1,320 ಹುದ್ದೆಗಳು
CISF SI (Fire) - ಪುರುಷರಿಗೆ ಮಾತ್ರ: 234 ಹುದ್ದೆಗಳು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: ಸೆಪ್ಟೆಂಬರ್ 10, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30, 2026 (ರಾತ್ರಿ 11:00 ಗಂಟೆಯವರೆಗೆ)
ಆನ್‌ಲೈನ್ ಶುಲ್ಕ ಪಾವತಿಗೆ ಕೊನೆಯ ದಿನ: ಅಕ್ಟೋಬರ್ 1, 2026
ಅರ್ಜಿ ತಿದ್ದುಪಡಿ ವಿಂಡೋ: ಅಕ್ಟೋಬರ್ 8 ರಿಂದ ಅಕ್ಟೋಬರ್ 10, 2026
ಅರ್ಹತೆ:
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು. (ದೆಹಲಿ ಪೊಲೀಸ್ ಎಸ್‌ಐ ಹುದ್ದೆಗೆ ಪುರುಷ ಅಭ್ಯರ್ಥಿಗಳು ಚಾಲನಾ ಪರವಾನಗಿ - LMV ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು).
ವಯೋಮಿತಿ: ಅಭ್ಯರ್ಥಿಗಳ ವಯಸ್ಸು 20 ರಿಂದ 25 ವರ್ಷಗಳ ಒಳಗಿರಬೇಕು. (ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ).
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಲೆವೆಲ್-6 ರ ಅಡಿಯಲ್ಲಿ ₹35,400 ರಿಂದ ₹1,12,400 ವರೆಗೆ ಮಾಸಿಕ ವೇತನ ಹಾಗೂ ಕೇಂದ್ರ ಸರ್ಕಾರದ ಇತರೆ ಭತ್ಯೆಗಳು ಸಿಗಲಿವೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ₹100
ಮಹಿಳೆಯರು, ಎಸ್‌ಸಿ, ಎಸ್‌ಟಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇರುವುದಿಲ್ಲ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಒಟ್ಟು 4 ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:
ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ - ಪೇಪರ್ 1
ದೈಹಿಕ ಗುಣಮಟ್ಟದ ಪರೀಕ್ಷೆ ಮತ್ತು ದೈಹಿಕ ಸಹಿಷ್ಣುತೆ ಪರೀಕ್ಷೆ
ಲಿಖಿತ ಪರೀಕ್ಷೆ - ಪೇಪರ್ 2
ವೈದ್ಯಕೀಯ ತಪಾಸಣೆ ಮತ್ತು ದಾಖಲಾತಿ ಪರಿಶೀಲನೆ
ಅರ್ಜಿ ಸಲ್ಲಿಕೆ ವಿಧಾನ:
ಸಿಬ್ಬಂದಿ ನೇಮಕಾತಿ ಆಯೋಗದ (SSC) ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುಲು ಅಭ್ಯರ್ಥಿಗಳು ಎಸ್‌ಎಸ್‌ಸಿಯ ಹೊಸ ಅಧಿಕೃತ ವೆಬ್‌ಸೈಟ್ ssc.gov.in ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಾಗುತ್ತದೆ.
ಸಿಬ್ಬಂದಿ ನೇಮಕಾತಿ ಆಯೋಗದ ಅರ್ಜಿ ಲಿಂಕ್: