SSLC ಪಾಸಾದವರಿಗೆ ಗುಡ್‌ನ್ಯೂಸ್; ಪೌರಾಡಳಿತ ಇಲಾಖೆಯಲ್ಲಿ 210 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಬಳ 76 ಸಾವಿರ

KEA Recruitment 2026: ಸರ್ಕಾರಿ ಕೆಲಸದ ಕನಸು ಕಾಣುತ್ತಿದ್ದೀರಾ? ಹಾಗಾದ್ರೆ, ಇಲ್ಲಿದೆ ಗುಡ್‌ನ್ಯೂಸ್! ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೌರಾಡಳಿತ ನಿರ್ದೇಶನಾಲಯದ ಅಡಿಯಲ್ಲಿ ಖಾಲಿ ಇರುವ 210 ಗ್ರೂಪ್​-ಸಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:
Job
Online Desk
Updated on

KEA Recruitment 2026: ಸರ್ಕಾರಿ ನೌಕರಿ ಹುಡುಕುತ್ತಿರುವ ಯುವಜನತೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಭರ್ಜರಿ ಸಿಹಿಸುದ್ದಿ ನೀಡಿದೆ. ಪೌರಾಡಳಿತ ನಿರ್ದೇಶನಾಲಯದ ಅಡಿಯಲ್ಲಿ ಖಾಲಿ ಇರುವ ಬರೋಬ್ಬರಿ 210 ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ತಾಂತ್ರಿಕ ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ:

ಹುದ್ದೆಗಳ ವಿವರ:

  • ಒಟ್ಟು 210 ಹುದ್ದೆಗಳು

    • ನೀರು ಸರಬರಾಜು ಆಪರೇಟರ್: 80 ಹುದ್ದೆಗಳು

    • ಎಲೆಕ್ಟ್ರಿಷಿಯನ್ ಗ್ರೇಡ್-1: 03 ಹುದ್ದೆಗಳು

    • ಸಹಾಯಕ ನೀರು ಸರಬರಾಜು ಆಪರೇಟರ್: 122 ಹುದ್ದೆಗಳು

    • ಎಲೆಕ್ಟ್ರಿಷಿಯನ್ ಗ್ರೇಡ್-2: 05 ಹುದ್ದೆಗಳು

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ: ಸೆಪ್ಟೆಂಬರ್ 16, 2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30, 2026

  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಅಕ್ಟೋಬರ್ 1, 2026

  • ಸ್ಪರ್ಧಾತ್ಮಕ ಪರೀಕ್ಷೆ: ನವೆಂಬರ್ 2026 ರಲ್ಲಿ ನಡೆಸಲು ಉದ್ದೇಶಿಸಲಾಗಿದೆ

ಅರ್ಹತೆ:

  • ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಸಂಬಂಧಪಟ್ಟ ಟ್ರೇಡ್‌ನಲ್ಲಿ ಐಟಿಐ ಸರ್ಟಿಫಿಕೇಟ್ ಹಾಗೂ ಕಡ್ಡಾಯವಾಗಿ ಅಪ್ರೆಂಟಿಸ್‌ಶಿಪ್ ತರಬೇತಿ ಪೂರ್ಣಗೊಳಿಸಿರಬೇಕು.

  • ವಯೋಮಿತಿ: ಕನಿಷ್ಠ 18 ವರ್ಷಗಳು ಪೂರ್ಣಗೊಂಡಿರಬೇಕು. ಗರಿಷ್ಠ ವಯೋಮಿತಿಯು ಸರ್ಕಾರದ ನಿಯಮಾವಳಿಗಳ ಪ್ರಕಾರ ಇರಲಿದೆ (ಸಾಮಾನ್ಯ ವರ್ಗಕ್ಕೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷ)

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ ಮತ್ತು ಪ್ರವರ್ಗ 2A, 2B, 3A, 3B: ₹750

  • SC / ST / ಪ್ರವರ್ಗ-1 / ಮಾಜಿ ಸೈನಿಕ / ತೃತೀಯ ಲಿಂಗಿ ಅಭ್ಯರ್ಥಿಗಳು: ₹500

  • ವಿಶೇಷ ಚೇತನ ಅಭ್ಯರ್ಥಿಗಳು: ₹250

Job
ಕೇಂದ್ರ ಸರ್ಕಾರಿ ಉದ್ಯೋಗಾವಕಾಶ: 212 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ UPSC

ಸಂಬಳ:

  • ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ. 34,100 ರಿಂದ ರೂ. 76,100 ರವರೆಗೆ ಆಕರ್ಷಕ ವೇತನ ಇರಲಿದೆ 

ಅರ್ಜಿ ಸಲ್ಲಿಸುವುದು ಹೇಗೆ?

  • ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣವಾದ KEA Website ಗೆ ಭೇಟಿ ನೀಡಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ:

  • ಅಭ್ಯರ್ಥಿಗಳನ್ನು ಕೆಇಎ ನಡೆಸುವ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಅಗತ್ಯವಿದ್ದಲ್ಲಿ ಕನ್ನಡ ಭಾಷಾ ಪರೀಕ್ಷೆಯ ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

Job
ಪರೀಕ್ಷೆಯಿಲ್ಲದೆ ರೈಲ್ವೆಯಲ್ಲಿ ಭರ್ಜರಿ ಜಾಬ್ ಆಫರ್; 4,471 ಹುದ್ದೆಗಳ ಬೃಹತ್ ನೇಮಕಾತಿ: ಅರ್ಜಿ ಸಲ್ಲಿಕೆಗೆ ಇಲ್ಲಿದೆ ಸಂಪೂರ್ಣ ವಿವರ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com