ಮೈಸೂರಿನಲ್ಲಿ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ ದಾಖಲೆ ಸಲ್ಲಿಸಿದ ರಶ್ಮಿಕಾ ಮಂದಣ್ಣ

ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಮಂಗಳವಾರ ಮೈಸೂರಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

Published: 21st January 2020 06:34 PM  |   Last Updated: 21st January 2020 06:34 PM   |  A+A-


rashmika mandanna

ರಶ್ಮಿಕಾ ಮಂದಣ್ಣ

Posted By : Lingaraj Badiger
Source : UNI

ಮೈಸೂರು: ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಮಂಗಳವಾರ ಮೈಸೂರಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿನ ನಟಿಯ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ ನಂತರ, ವಿಚಾರಣೆಗಾಗಿ ಇಲಾಖೆಯ ಮುಂದೆ ಹಾಜರಾಗುವಂತೆ ರಶ್ಮಿಕಾ ಹಾಗೂ ಅವರ ಕುಟುಂಬಕ್ಕೆ ಸೂಚಿಸಿದ್ದರು. ಅಲ್ಲದೆ
ರಶ್ಮಿಕಾ ಮನೆಯಿಂದ ಆದಾಯ ತೆರಿಗೆ ಅಧಿಕಾರಿಗಳು ಅನೇಕ ದಾಖಲೆಗಳನ್ನು ವಶಪಡಿಸಿಕೊಂಡು, ನಿಯಮಾವಳಿಯಂತೆ ವಿವರಣೆಯನ್ನು ಕೋರಿದ್ದರು.

ಈ ಹಿನ್ನೆಲೆಯಲ್ಲಿ ರಶ್ಮಿಕಾ ಅವರು ಇಂದು ತಮ್ಮ ತಂದೆ ಮದನ್ ಮಂದಣ್ಣ ಅವರೊಂದಿಗೆ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ, ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿದ್ದಾರೆ.

ಕನ್ನಡ ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿರುವ ರಶ್ಮಿಕಾ ಮಂದಣ್ಣ ಅವರು, ಇತ್ತೀಚೆಗೆ ಬಿಡುಗಡೆಯಾಗಿರುವ ‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಟಾಲಿವುಡ್ ನ ಖ್ಯಾತ ನಟ ಮಹೇಶ್ ಬಾಬು ಜತೆ ನಟಿಸಿದ್ದರು. ಈ ಮೂಲಕ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರೆನಿಸಿದ್ದಾರೆ.

Stay up to date on all the latest ಸಿನಿಮಾ news
Poll
Babri Masjid

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯ ಒದಗಿಸಲಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp