

ಬೆಂಗಳೂರು: ಕನ್ನಡದ ಖ್ಯಾತ ನಟಿ ಕಾಂತಾರಾ ಚಾಪ್ಟರ್ 1 ಕನಕವತಿ ಖ್ಯಾತಿಯ ರುಕ್ಮಿಣಿ ವಸಂತ್ ಹೆಸರಲ್ಲಿ ವಂಚನೆ ನಡೆಯುತ್ತಿದ್ದು, ಈ ಸಂಬಂಧ ಸ್ವತಃ ನಟಿಯೇ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿರುವ ನಟಿ ರುಕ್ಮಿಣಿ ವಸಂತ್, 'ತಮ್ಮ ಹೆಸರಲ್ಲಿ ಯಾರೋ ಮೋಸ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
9445893273 ಸಂಖ್ಯೆಯ ನಂಬರ್ ಇಂದ ವ್ಯಕ್ತಿಯೋರ್ವ ವಿವಿಧ ಜನರಿಗೆ ಕರೆ ಮಾಡುತ್ತಿದ್ದಾನೆ. ಕರೆ ಮಾಡಿ ಮೋಸ ಮಾಡುತ್ತಿರುವುದು ಅವರ ಗಮನಕ್ಕೆ ಬಂದಿದೆ. ಹೀಗಾಗಿ, ಎಚ್ಚರಿಕೆ ನೀಡಿದ್ದಾರೆ. ‘ಈ ಮೊಬೈಲ್ ಸಂಖ್ಯೆ ನನಗೆ ಸೇರಿದ್ದಲ್ಲ.
ಇದರಿಂದ ಬರುವ ಯಾವುದೇ ಮೆಸೇಜ್ ಅಥವಾ ಕರೆ ಬಂದರೆ ಅದು ಫೇಕ್. ಅದು ನಾನಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ದಯವಿಟ್ಟು ಅಂತಹ ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ ಅಥವಾ ಅವರೊಂದಿಗೆ ತೊಡಗಿಸಿಕೊಳ್ಳಬೇಡಿ’ ಎಂದು ರುಕ್ಮಿಣಿ ವಸಂತ್ ಬರೆದುಕೊಂಡಿದ್ದಾರೆ.
‘ಈ ರೀತಿ ಮೋಸ ಮಾಡುವುದು ಸೈಬರ್ ಅಪರಾಧದ ವ್ಯಾಪ್ತಿಗೆ ಬರುತ್ತದೆ. ವಂಚನೆ ಮತ್ತು ದಾರಿತಪ್ಪಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
ಈ ಬಗ್ಗೆ ಏನಾದರೂ ಸ್ಪಷ್ಟನೆ ಬೇಕಿದ್ದರೆ ನನ್ನ ಅಥವಾ ನನ್ನ ತಂಡವನ್ನು ಸಂಪರ್ಕಿಸಿ. ನಿಮ್ಮ ತಿಳುವಳಿಕೆ ಮತ್ತು ಸಹಕಾರಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಆನ್‌ಲೈನ್‌ನಲ್ಲಿ ಜಾಗರೂಕರಾಗಿರಿ ಮತ್ತು ಸುರಕ್ಷಿತವಾಗಿರಿ’ ಎಂದು ರುಕ್ಮಿಣಿ ವಸಂತ್ ಬರೆದುಕೊಂಡಿದ್ದಾರೆ.
Advertisement