ಬಾಲಿವುಡ್

ಮಾಧುರಿಗೆ ಬೆದರಿಕೆ ಸಂದೇಶ ಕಳಿಸಿದ ಯುವಕನ ಬಂಧನ

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್‌ಗೆ ಬೆದರಿಕೆ ಸಂದೇಶಗಳನ್ನು ಕಳಿಸಿ ಹಣಕ್ಕಾಗಿ ಪೀಡಿಸುತ್ತಿದ್ದ ...

ಮಾಧುರಿಗೆ ಬೆದರಿಕೆ ಸಂದೇಶ ಕಳಿಸಿದ ಯುವಕನ ಬಂಧನ
ಮಾಧುರಿ ದೀಕ್ಷಿತ್‌
Published On :

ಮುಂಬೈ: ಬಾಲಿವುಡ್ ನಟಿ ಮಾಧುರಿ ದೀಕ್ಷಿತ್‌ಗೆ ಬೆದರಿಕೆ ಸಂದೇಶಗಳನ್ನು ಕಳಿಸಿ ಹಣಕ್ಕಾಗಿ ಪೀಡಿಸುತ್ತಿದ್ದ 23ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಹೋಟೆಲ್‌ವೊಂದರಲ್ಲಿ ಪರಿಚಾರಕನಾಗಿರುವ ಪ್ರವೀಣ್ ಕುಮಾರ್ ಪ್ರಧಾನ್ ಎಂಬಾತ ತನಗೆ ಭೂಗತಲೋಕದೊಂದಿಗೆ ಸಂಪರ್ಕವಿರುವುದಾಗಿ ಹೇಳಿಕೊಂಡಿದ್ದು, ಮಾಧುರಿಗೆ ಸಂದೇಶ ಕಳುಹಿಸಿ ಆಕೆಯನ್ನು ಮತ್ತು ಆಕೆಯ ಮಕ್ಕಳನ್ನು ಕೊಲ್ಲುವುದಾಗಿ ಬೆದರಿಸಿದ್ದ.

ಈ ಬಗ್ಗೆ ಮಾಧುರಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರು ನಿನ್ನೆ ಈತನನ್ನು ಬಂಧಿಸಿ, ಮೊಬೈಲ್ ಫೋನ್‌ನ್ನು ವಶ ಪಡಿಸಿದ್ದಾರೆ.

ಬಂಧಿತ ಯುವಕನ್ನು ಶುಕ್ರವಾರ ಕೋರ್ಟ್‌ಗೆ ಹಾಜರು ಪಡಿಸಿದ್ದು, ನಾಳೆಯವರೆಗೆ ಪೊಲೀಸ್ ವಶದಲ್ಲೇ ಇರಿಸುವಂತೆ ಕೋರ್ಟ್ ಆದೇಶಿಸಿರುವುದಾಗಿ ಬಾಂದ್ರಾ ಸಬರ್ಬನ್ ಸೈಬರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸುನಿಲ್ ಗೋಸಾಲ್ಕರ್ ಹೇಳಿದ್ದಾರೆ.

ಮಾಧುರಿಗೆ ಕಳಿಸಿದ ಸಂದೇಶವೊಂದರಲ್ಲಿ ಪ್ರಧಾನ್, ತಾನು ಭೂಗತಲೋಕದ ಡಾನ್ ಛೋಟಾ ರಾಜನ್‌ರ ಗ್ಯಾಂಗ್‌ನವನು ಎಂದಿದ್ದಾನೆ. ತಾನು ಸಶಸ್ತ್ರಧಾರಿಯಾದ 15ರ ಹರೆಯದ ಹುಡುಗನೊಬ್ಬನನ್ನು ನಿಮ್ಮ ಮನೆಗೆ ಕಳುಹಿಸುತ್ತಿದ್ದು, ಅವನ ಕೈಯಲ್ಲಿ ನಾ ಕೇಳಿದಷ್ಟು ಮೊತ್ತವನ್ನು ಕೊಟ್ಟು ಬಿಡಿ ಎಂದಿದ್ದನು.

ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದಾಗ ಪ್ರಧಾನ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.