ಮುಂಬಯಿ: 1993ರ ಮುಂಬಯಿ ಸರಣಿ ಬಾಂಬ್ ಸ್ಫೋಟ ಆರೋಪದಲ್ಲಿ ಜೈಲುವಾಸ ಅನುಭವಿಸುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ಅವಧಿಗೂ ಮುನ್ನ ಅಂದರೆ ಆರು ತಿಂಗಳು ಮೊದಲೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪುಣೆಯ ಯೆರವಾಡ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸಂಜಯ್ ದತ್, ಸನ್ನಡತೆ ಆಧಾರದ ಮೇಲೆ ಆರು ತಿಂಗಳು ಮೊದಲೇ ಬಿಡುಗಡೆಯಾಗಲಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.
ಅಪರಾಧಿಯು ತನ್ನ ಜೈಲು ಶಿಕ್ಷೆ ವೇಳೆ ಉತ್ತಮ ನಡತೆ ತೋರಿದರೆ ಅಂಥ ಖೈದಿಗೆ 114 ದಿನಗಳು ಶಿಕ್ಷೆ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸಂಜಯ್ ದತ್ ಅವರ ಎಲ್ಲ ದಾಖಲೆಗಳನ್ನು ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
Advertisement