ಬಾಲಿವುಡ್ ದಿಗ್ಗಜ ದಿಲೀಪ್ ಕುಮಾರ್‌ಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

ಬಾಲಿವುಡ್ ನಟ ದಿಲೀಪ್ ಕುಮಾರ್ ಅವರಿಗೆ ದೇಶದ 2ನೇ ಅತ್ಯುತ್ತಮ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು...
ದಿಲೀಪ್ ಕುಮಾರ್
ದಿಲೀಪ್ ಕುಮಾರ್
ಮುಂಬೈ: ಬಾಲಿವುಡ್ ನಟ ದಿಲೀಪ್ ಕುಮಾರ್ ಅವರಿಗೆ ದೇಶದ 2ನೇ ಅತ್ಯುತ್ತಮ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುಂಬೈನಲ್ಲಿರುವ ದಿಲೀಪ್ ಕುಮಾರ್ ಅವರ ನಿವಾಸದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೇರಿ ಹಲವರ ಸಮ್ಮುಖದಲ್ಲಿ ನಟನಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು. 
1991ರಲ್ಲಿ ಪದ್ಮಭೂಷಣ ಗೌರವ ಪಡೆದಿದ್ದ ದಿಲೀಪ್ ಕುಮಾರ್ ಅವರಿಗೆ ಕೇಂದ್ರ ಸರ್ಕಾರ ಮತ್ತೊಂದು ಪದ್ಮಪ್ರಶಸ್ತಿ ನೀಡಿ ಗೌರವಿಸಿದೆ. 
93 ವರ್ಷದ ದಿಲೀಪ್ ಕುಮಾರ್ ಅವರಿಗೆ ಜೀವಮಾನ ಸಾಧನೆಗಾಗಿ 1993ರಲ್ಲಿ ಫಿಲ್ಮಫೇರ್ ಪ್ರಶಸ್ತಿ. 1994ರಲ್ಲಿ ದಾದಾಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದರು. ದಿಲೀಪ್ ಕುಮಾರ್ ಅವರಿಗೆ ಒಟ್ಟು 8 ಬಾರಿ ಉತ್ತಮ ನಟನೆಗೆ ಫಿಲ್ಮಫೇರ್ ಪ್ರಶಸ್ತಿ ಪಡೆದಿದ್ದು, ಅತಿ ಹೆಚ್ಚು ಪ್ರಶಸ್ತಿ ಪಡೆದ ಭಾರತೀಯ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 
1944 ರಲ್ಲಿ ಜ್ವರ್ ಬಾತ್ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಜೋಗನ್, ತರನ, ಹಲ್ ಚಲ್, ದಿದರ್, ದಾಗ್ ಹಾಗೂ 1955ರಲ್ಲಿ ಬಂದ ದೇವದಾಸ್ ಚಿತ್ರದ ಮೂಲಕ ಜನಮನ್ನಣೆ ಗಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com