ಹಿಂದಿ ಬಿಗ್ ಬಾಸ್ ಶೋ ವಿರುದ್ಧ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ ಮಹಿಳಾ ಆಯೋಗದ ಒತ್ತಾಯ

ಕಲರ್ಸ್ ಚಾನೆಲ್ ನಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಬಿಗ್ ಬಾಸ್ ಉತ್ತರ ಪ್ರದೇಶ ಮಹಿಳಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ.
ಬಿಗ್ ಬಾಸ್ (ಸಂಗ್ರಹ ಚಿತ್ರ)
ಬಿಗ್ ಬಾಸ್ (ಸಂಗ್ರಹ ಚಿತ್ರ)

ಲಖನೌ: ಕಲರ್ಸ್ ಚಾನೆಲ್ ನಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಬಿಗ್ ಬಾಸ್ ಉತ್ತರ ಪ್ರದೇಶ ಮಹಿಳಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ.
ಬಿಗ್ ಬಾಸ್ ಶೋ ಸೀಸನ್ 9 ರಿಯಾಲಿಟಿ ಶೋ ಮಹಿಳೆಯರ ವಿರುದ್ಧದ ದೌರ್ಜನ್ಯವನ್ನು ಉತ್ತೇಜಿಸುತ್ತಿದ್ದು, ಕಾರ್ಯಕ್ರಮದಲ್ಲಿ ಮಹಿಳಾ ಸ್ಪರ್ಧಿಗಳ ಬಗ್ಗೆ ಆಕ್ಷೇಪಾರ್ಹ ಭಾಷೆ ಬಳಕೆಯಾಗುತ್ತಿದೆ ಎಂದು ಆರೋಪಿಸಿ ಮಹಿಳಾ ಆಯೋಗದ ಮುಖ್ಯಸ್ಥೆ ಜರ್ನಿಯಾ ಉಸ್ಮಾನಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
ಮಹಿಳೆಯರ ವಿರುದ್ಧ ದೌರ್ಜನ್ಯವನ್ನು ಉತ್ತೇಜಿಸುತ್ತಿರುವ ಕಾರ್ಯಕ್ರಮದ ನಿರ್ಮಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಆಯೋಗದ ಮುಖ್ಯಸ್ಥರು ಪತ್ರದ ಮೂಲಕ ಸಚಿವಾಲಯವನ್ನು ಒತ್ತಾಯಿಸಿದ್ದಾರೆ. ಕಳೆದ ಸಂಚಿಕೆಯಲ್ಲಿ ಬಿಗ್ ಬಾಸ್ ನ ಪುರುಷ ಸ್ಪರ್ಧಿಗಳು ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಭಾಷೆ ಬಳಸುವುದು ಅಲ್ಲದೇ ದೈಹಿಕವಾಗಿ ದೌರ್ಜನ್ಯವೆಸಗಿರುವುದು ಕಂಡುಬಂದಿದೆ, ಇದೊಂದು ಕೆಟ್ಟ ಉದಾಹರಣೆಯನ್ನು ಜನರಿಗೆ ತಲುಪಿಸುತ್ತಿದೆ ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಸ್ಮಾನಿ ಆಗ್ರಹಿಸಿದ್ದಾರೆ.
ದೌರ್ಜನ್ಯ ನಡೆದಿರುವ ವಿಡಿಯೋ ತುಣುಕುಗಳನ್ನು ಪ್ರಸಾರ ಭಾರತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೂ ಕಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com