
ಮುಂಬೈ: ಎಚ್1 ಎನ್1 ಸೋಂಕಿನಿಂದ ಬಳಲುತ್ತಿದ್ದ ಬಾಲಿವುಡ್ ನಟಿ ಸೋನಂ ಕಪೂರ್, ತಾನು ಗುಣಮುಖಳಾಗುತ್ತಿರುವುದಾಗಿ ಗುರುವಾರ ಹೇಳಿದ್ದಾರೆ.
ಬಾಲಿವುಡ್ ಹಿರಿಯ ನಟ ಹಾಗೂ ನಿರ್ಮಾಪಕ ಅನಿಲ್ ಕಪೂರ್ ಪುತ್ರಿ ಇಂದು ತಮ್ಮ ಆರೋಗ್ಯದ ಬಗ್ಗೆ ಟ್ವೀಟ್ ಮಾಡಿದ್ದು, ತನ್ನ ಚೇತರಿಕೆಗಾಗಿ ಪ್ರಾರ್ಥಿಸಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.
'ನಾನು ಈಗ ಸಂಪೂರ್ಣ ಗುಣಮುಖಳಾಗುತ್ತಿದ್ದೇನೆ... ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು' ಎಂದು ಸೋನಂ ಆಸ್ಪತ್ರೆಯಿಂದ ಟ್ವೀಟ್ ಮಾಡಿದ್ದಾರೆ.
ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಸಲ್ಮಾನ್ ಖಾನ್ ಅಭಿನಯದ 'ರತನ್ ಧನ್ ಪಾಯೋ' ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಸೋನಂ ಕಪೂರ್‌ಗೆ ಎಚ್1ಎನ್1 ಸೋಂಕು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಅಲ್ಲಿನ ಸ್ಟೆರ್ಲಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಭಾನುವಾರ ಅವರನ್ನು ರಾಜ್‌ಕೋಟ್‌ನಿಂದ ಮುಂಬೈನ ಕೋಕಿಲಬೇನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.
Advertisement