ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಿಕ್ಕಾಪಟ್ಟೆ ಮಿಂಚಿದ್ದಾರೆ. ರೆಡ್ ಕಾರ್ಪೆಟ್‌ನಲ್ಲಿ ರಾಜಕುಮಾರಿಯಂತೆ ಪ್ರಿಯಾಂಕ ಕಾಣಿಸಿಕೊಂಡಿದ್ದರು. ಮೊದಲ ಬಾರಿ ಆಸ್ಕರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಿಯಾಂಕ ತನ್ನ ಉಡುಪು, ವಯ್ಯಾರ, ಹಾವ ಭಾವಗಳಿಂದಲೇ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯೂ ಆಗಿದ್ದಾರೆ.