
ಮುಂಬೈ: ಅತ್ಯಾಚಾರ ಕುರಿತಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹೇಳಿಕೆಯನ್ನು ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ಕಂಗನಾ ರಣಾವತ್ ಟೀಕಿಸಿದ್ದಾರೆ.
ಸಲ್ಮಾನ್ ಖಾನ್ ಹೇಳಿಕೆ ಅಸಂವೇದನರಹಿತವಾಗಿದೆ ಎಂದು ಟೀಕಿಸಿರುವ ಕಂಗನಾ ರಣಾವತ್, ಸಲ್ಮಾನ್ ನಂತ ನಟರು ಈ ರೀತಿ ಹೇಳಿಕೆ ನೀಡಿರುವುದು ದುರಾದುಷ್ಟಕರ. ಇಂತ ಹೇಳಿಕೆ ನೀಡುವ ಮುನ್ನ ಸಲ್ಮಾನ್ ಖಾನ್ ಯೋಚಿಸಬೇಕಿತ್ತು ಎಂದು ಹೇಳಿದ್ದಾರೆ.
ಸಲ್ಮಾನ್ ಹೇಳಿಕೆ ಕುರಿತಂತೆ ಬಾಲಿವುಡ್ ನ ಹಲವು ಸ್ಟಾರ್ ಗಳು ತೀವ್ರವಾಗಿ ಖಂಡಿಸಿದ್ದು, ಸಮಾಜ ಇಂತ ಮಹಿಳಾ ವಿರೋಧಿ ಹೇಳಿಕೆಗಳ ವಿರುದ್ಧ ಒಟ್ಟಾಗಿ ನಿಲ್ಲಬೇಕು. ಇಂತಹ ಹೇಳಿಕೆಯಿಂದ ಒಬ್ಬ ವ್ಯಕ್ತಿಗಲ್ಲ ಇಡೀ ಸಮಾಜಕ್ಕೆ ಅಪಮಾನವಾಗಿದೆ ಎಂದು ಕಂಗನಾ ಹೇಳಿದ್ದಾರೆ.
ಬಾಲಿವುಡ್ ನ ಬಹುನಿರೀಕ್ಷಿತ ಸುಲ್ತಾನ್ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಶೂಟಿಂಗ್ ಮುಗಿದ ಬಳಿಕ ನನ್ನ ಸ್ಥಿತಿ ಅತ್ಯಾಚಾರಕ್ಕೊಳಗಾದ ಮಹಿಳೆಯಂತಾಗುತ್ತಿತ್ತು ಎಂದು ಸಲ್ಮಾನ್ ಖಾನ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ.
Advertisement