ಅತ್ಯಾಚಾರ ಹೇಳಿಕೆ: ಸಲ್ಲುಗೆ ಮತ್ತಷ್ಟು ಸಂಕಷ್ಟ, ಮಹಿಳಾ ಆಯೋಗದಿಂದ ಸಮನ್ಸ್

ಸುಲ್ತಾನ್ ಚಿತ್ರದ ಶೂಟಿಂಗ್ ನಂತರ ನನಗೆ ಮಹಿಳೆಯೊಬ್ಬಳು ಅತ್ಯಾಚಾರಕ್ಕೆ ಒಳಗಾದಂತಹ ಅನುಭವಾಗುತ್ತಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್...
ಸಲ್ಮಾನ್ ಖಾನ್
ಸಲ್ಮಾನ್ ಖಾನ್
Updated on: 
ನವದೆಹಲಿ: ಸುಲ್ತಾನ್ ಚಿತ್ರದ ಶೂಟಿಂಗ್ ನಂತರ ನನಗೆ ಮಹಿಳೆಯೊಬ್ಬಳು ಅತ್ಯಾಚಾರಕ್ಕೆ ಒಳಗಾದಂತಹ ಅನುಭವಾಗುತ್ತಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರು ಈಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಲ್ಮಾನ್ ಹೇಳಿಕೆಗೆ ಬಾಲವುಡ್ ನಟಿಯರು ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಸಲ್ಲು ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ, ಜುಲೈ 8ರಂದು ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟನಿಗೆ ಗುರುವಾರ ಸಮನ್ಸ್ ನೀಡಿದೆ.
ಈ ಮುಂಚೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ ಗೆ ತಮ್ಮ ವಕೀಲರ ಮೂಲಕ ಉತ್ತರ ನೀಡಿದ್ದ ಸಲ್ಲು, ಕ್ಷಮೆಯಾಚಿಸುವ ಸೂಚನೆ ಸಹ ನೀಡಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರಮಂಗಲಂ ಅವರು ಹೇಳಿದ್ದರು. ಅಲ್ಲದೆ ಈ ಸಂಬಂಧ ಖುದ್ದು ಜುಲೈ 8ರಂದು ವಿಚಾರಣೆಗೆ ಹಾಜರಾಗುವಂತೆ ಸಲ್ಮಾನ್ ಖಾನ್ ಗೆ ಸಮನ್ಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com