
ಮುಂಬಯಿ: ಅನಾರೋಗ್ಯದಿಂದ ಬಳಲುತ್ತಿರುವ ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅನು ಮಲ್ಲಿಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ಯಾಂಕ್ರಿಯಾಟಿಟಿಸ್ ನಿಂದ ಬಳಲುತ್ತಿರುವ ಅನು ಮಲಿಕ್ ಕಳೆದ ವಾರವಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು. ಹೊಟ್ಟೆನೋವಿನಿಂದ ಬಳಲುತ್ತಿದ್ದ ಅನು ಮಲಿಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ಅವರ ಪುತ್ರಿ ಅನ್ ಮೋಲ್ ತಿಳಿಸಿದ್ದಾರೆ.
ಅನು ಮಲಿಕ್ ಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಭಯಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಗುರುವಾರ ಅನು ಮಲ್ಲಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಅವರ ಪುತ್ರಿ ಹೇಳಿದ್ದಾರೆ.
ಸಂಬಂಧಿಕರು ಆಪ್ತರು ಹಾಗೂ ಸ್ನೇಹಿತರು ಆಸ್ಪತ್ರೆಗೆ ಭೇಟಿ ಅನು ಮಲ್ಲಿಕ್ ಆರೋಗ್ಯ ವಿಚಾರಿಸಿದ್ದಾರೆ. ಆಶಾ ಭೋಸ್ಲೆ, ಮಹೇಶ್ ಭಟ್, ಹಲವು ಸಿನಿಮಾ ಇಂಡಸ್ಟ್ರಿಯ ಮಂದಿ ಭೇಟಿ ನೀಡಿ ಅನು ಮಲಿಕ್ ಆರೋಗ್ಯ ವಿಚಾರಿಸಿ, ಬೇಗ ಗುಣಮುಖವಾಗುವಂತೆ ಹಾರೈಸಿದ್ದಾರೆ
Advertisement