ಸಲ್ಮಾನ್ ಖಾನ್ (ಸಂಗ್ರಹ ಚಿತ್ರ)
ಬಾಲಿವುಡ್
ತೆರಿಗೆ ಪಾವತಿಯಲ್ಲಿ ಸಲ್ಮಾನ್ ಖಾನ್ ಮೊದಲಿಗರು: ಅಕ್ಷಯ್, ಹೃತಿಕ್ ರನ್ನು ಹಿಂದಿಕ್ಕಿದ ಸೂಪರ್ ಸ್ಟಾರ್
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಈ ಹಣಕಾಸು ವರ್ಷದಲ್ಲಿ ಅತ್ಯಂತ ಹೆಚ್ಚು ತೆರಿಗೆ ಪಾವತಿಸಿದ ನಟರಲ್ಲಿ...
ನವದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಈ ಹಣಕಾಸು ವರ್ಷದಲ್ಲಿ ಅತ್ಯಂತ ಹೆಚ್ಚು ತೆರಿಗೆ ಪಾವತಿಸಿದ ನಟರಲ್ಲಿ ಮೊದಲಿನವರಾಗಿದ್ದಾರೆ.
ಪ್ರಮುಖ ದೈನಿಕವೊಂದರ ಪ್ರಕಾರ, ಬಾಲಿವುಡ್ ನಲ್ಲಿ ಅತಿ ಹೆಚ್ಚು ತೆರಿಗೆ ಪಾವತಿ ಮಾಡಿದವರಲ್ಲಿ ಸಲ್ಮಾನ್ ಖಾನ್ ಮೊದಲಿಗರಾಗಿದ್ದು 16 ಕೋಟಿ ರೂಪಾಯಿ ಕಟ್ಟಿದ್ದಾರೆ. ಕಳೆದ ವರ್ಷ ಅಕ್ಷಯ್ ಕುಮಾರ್ 18 ಕೋಟಿ ರೂಪಾಯಿ ತೆರಿಗೆ ಪಾವತಿಸಿ ಮೊದಲಿಗರಾಗಿದ್ದರೆ, ಈ ವರ್ಷ 11 ಕೋಟಿ ರೂಪಾಯಿ ಪಾವತಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ ಎಂದು ಪಿಂಕ್ ವಿಲ್ಲಾ ವರದಿ ಮಾಡಿದೆ.
ಇನ್ನು ಹೃತಿಕ್ ರೋಷನ್ ಕೂಡ 11 ಕೋಟಿ ರೂಪಾಯಿ ತೆರಿಗೆ ಪಾವತಿಸುವ ಮೂಲಕ ಕಿಲಾಡಿ ಅಕ್ಷಯ್ ರೊಂದಿಗೆ ಸ್ಥಾನ ಪಡೆದಿದ್ದಾರೆ.
ಮೂರನೇ ಸ್ಥಾನದಲ್ಲಿ ರಾಕ್ ಸ್ಟಾರ್ ನಟ ರಣಬೀರ್ ಕಪೂರ್ 7.8 ಕೋಟಿ ರೂಪಾಯಿ ತೆರಿಗೆ ಪಾವತಿಸಿದ್ದಾರೆ. ಕಾಮಿಡಿಯನ್ ಕಪಿಲ್ ಶರ್ಮಾ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ಅವರನ್ನು ಈ ವರ್ಷ ಹಿಂದಿಕ್ಕಿದ್ದಾರೆ. ಕಪಿಲ್ ಶರ್ಮಾ 6.06 ಕೋಟಿ ರೂಪಾಯಿ ತೆರಿಗೆ ಕಟ್ಟಿದರೆ ಅಮೀರ್ ಖಾನ್ 3.7 ಕೋಟಿ ರೂಪಾಯಿ ತೆರಿಗೆ ಕಟ್ಟಿದ್ದಾರೆ. ಇವರು ಕಳೆದ ವರ್ಷ 4.5 ಕೋಟಿ ರೂಪಾಯಿ ತೆರಿಗೆ ಪಾವ ತಿಸಿದ್ದರು.
ಇನ್ನು ಮೆಗಾಸ್ಟಾರ್ ಅಮಿತಾಬ್ ಬಚ್ಚನ್, ಶಾರೂಕ್ ಖಾನ್ ಮತ್ತು ಐಶ್ವರ್ಯಾ ರೈ ಅವರು ಪಾವತಿಸಿದ ತೆರಿಗೆ ವಿವರಗಳನ್ನು ಆದಾಯ ತೆರಿಗೆ ಇಲಾಖೆ ಬಹಿರಂಗಪಡಿಸಿಲ್ಲ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ