ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ರಾಜಸ್ತಾನ ಸರ್ಕಾರ

ಕೃಷ್ಣ ಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ್ ಸಲ್ಮಾನ್ ಖಾನ್ ಖುಲಾಸೆಗೊಳಿಸಿದ ರಾಜಸ್ತಾನ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜಸ್ತಾನ ಸರ್ಕಾರ ಸುಪ್ರೀಂ ...
ಸಲ್ಮಾನ್ ಖಾನ್
ಸಲ್ಮಾನ್ ಖಾನ್

ಜೈಪುರ: ಕೃಷ್ಣ ಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ್ ಸಲ್ಮಾನ್ ಖಾನ್  ಖುಲಾಸೆಗೊಳಿಸಿದ ರಾಜಸ್ತಾನ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜಸ್ತಾನ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಶೂಟಿಂಗ್ ವೇಳೆ  ಕೃಷ್ಣ ಮೃಗ ಬೇಟೆಗೆ ಸಂಬಂಧಿಸಿದ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿ ರಾಜಸ್ಥಾನ ಹೈಕೋರ್ಟ್ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಜುಲೈ 25 ರಂದು ಖುಲಾಸೆಗೊಳಿಸಿ ತೀರ್ಪು ನೀಡಿತ್ತು.

1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್​ವೇಳೆ ಜೋಧ್ ಪುರದ ಬಳಿಯಲ್ಲಿರುವ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್​ ಕೃಷ್ಣಮೃಗ ಬೇಟೆ ಮತ್ತು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲು ವಿರುದ್ಧ ಎರಡು ದೂರು ದಾಖಲಾಗಿದ್ದವು.

ರಕ್ಷಿತ ಅರಣ್ಯ ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಸಲ್ಮಾನ್​ಖಾನ್​ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com