ಎ ದಿಲ್ ಹೈ ಮುಷ್ಕಿಲ್ ಚಿತ್ರಕ್ಕೆ ತಡೆಯೊಡ್ಡುವುದಿಲ್ಲ: ಎಂಎನ್ಎಸ್
ಎ ದಿಲ್ ಹೈ ಮುಷ್ಕಿಲ್ ಚಿತ್ರಕ್ಕೆ ತಡೆಯೊಡ್ಡುವುದಿಲ್ಲ: ಎಂಎನ್ಎಸ್

ಎ ದಿಲ್ ಹೈ ಮುಷ್ಕಿಲ್ ಚಿತ್ರಕ್ಕೆ ತಡೆಯೊಡ್ಡುವುದಿಲ್ಲ: ಎಂಎನ್ಎಸ್

ಎ ದಿಲ್ ಹೈ ಮುಷ್ಕಿಲ್ ಚಿತ್ರ ತೆರೆ ಕಾಣುವುದಕ್ಕೆ ಅಡ್ಡಿ ಪಡಿಸುವುದಾಗಿ ಹೇಳಿದ್ದ ಎಂಎನ್ ಎಸ್ ಈಗ ತನ್ನ ಹೇಳಿಕೆಯನ್ನು ವಾಪಸ್ ಪಡೆಯಿದೆ.

ಮುಂಬೈ: ಪಾಕಿಸ್ತಾನಿ ಕಲಾವಿದರನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿ, ಪಾಕ್ ಕಲಾವಿದರು ನಟಿಸಿರುವ ಎ ದಿಲ್ ಹೈ ಮುಷ್ಕಿಲ್ ಚಿತ್ರ ತೆರೆ ಕಾಣುವುದಕ್ಕೆ ಅಡ್ಡಿ ಪಡಿಸುವುದಾಗಿ ಹೇಳಿದ್ದ ಎಂಎನ್ ಎಸ್ ಈಗ ತನ್ನ ಹೇಳಿಕೆಯನ್ನು ವಾಪಸ್ ಪಡೆಯಿದೆ.
ಎ ದಿಲ್ ಹೈ ಮುಷ್ಕಿಲ್ ಚಿತ್ರಕ್ಕೆ ತಡೆಯೊಡ್ಡುವುದಿಲ್ಲ ಎಂದು ಎಂಎನ್ಎಸ್ ಸ್ಪಷ್ಟಪಡಿಸಿದೆ. ಪಾಕಿಸ್ತಾನಿ ನಟರೊಂದಿಗೆ ಕೆಲಸ ಮಾಡುವುದಿಲ್ಲ ಎಂದು ನಿರ್ಮಾಪಕರು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಚಿತ್ರಕ್ಕೆ ತಡೆಯೊಡ್ಡುವುದಿಲ್ಲ ಎಂದು ಹೇಳಿದೆ. ಕರಣ್ ಜೋಹಾರ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಪಾಕಿಸ್ತಾನದ ನಟ ಫವಾದ್ ಖಾನ್ ಅಭಿನಯಿಸಿರುವುದರಿಂದ ಈ ಚಿತ್ರ ತೆರೆ ಕಾಣಲು ಬಿಡುವುದಿಲ್ಲವೆಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ ಹೇಳಿದ್ದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಎಂಎನ್ಎಸ್ ಮುಖಂಡ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದ ನಿರ್ಮಾಪಕ ಸಂಘದ ಅಧ್ಯಕ್ಷ ಮುಖೇಶ್ ಭಟ್ ಪಾಕ್ ಕಲಾವಿದರೊಂದಿಗೆ ಕೆಲಸ ಮಾಡುವುದಿಲ್ಲ ಎಂಬ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಂಎನ್ಎಸ್ ಎ ದಿಲ್ ಹೈ ಮುಷ್ಕಿಲ್ ಚಿತ್ರ ತೆರೆಕಾಣಲು ಅಡ್ಡಿ ಉಂಟು ಮಾಡುವುದಿಲ್ಲ ಎಂದು ಹೇಳಿದೆ.

Related Stories

No stories found.

Advertisement

X
Kannada Prabha
www.kannadaprabha.com