'ಟೈಗರ್ ಜಿಂದಾ ಹೈ' ಗೆ ಪಾಕ್ ಸೆನ್ಸಾರ್ ತಕರಾರು, ಬಿಡುಗಡೆ ವಿಳಂಬ

ಖ್ಯಾತ ಬಾಲಿವುಡ್ಸ ನಟ ಸಲ್ಮಾನ್ ಖಾನ್ ಅಭಿನಯದ ಟೈಗರ್ ಜಿಂದಾ ಹೈ ಚಿತ್ರಕ್ಕೆ ಪ್ರಮಾಣ ಪತ್ರ ನೀಡಲು ಪಾಕಿಸ್ತಾನ ಸೆನ್ಸಾರ್ ಮಂಡಳಿ ನಕಾರಾ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಪಾಕಿಸ್ತಾನದಲ್ಲಿ ಚಿತ್ರ ಬಿಡುಗಡೆ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಮುಂಬೈ: ಖ್ಯಾತ ಬಾಲಿವುಡ್ಸ ನಟ ಸಲ್ಮಾನ್ ಖಾನ್ ಅಭಿನಯದ ಟೈಗರ್ ಜಿಂದಾ ಹೈ ಚಿತ್ರಕ್ಕೆ ಪ್ರಮಾಣ ಪತ್ರ ನೀಡಲು ಪಾಕಿಸ್ತಾನ ಸೆನ್ಸಾರ್ ಮಂಡಳಿ ನಕಾರಾ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಪಾಕಿಸ್ತಾನದಲ್ಲಿ ಚಿತ್ರ ಬಿಡುಗಡೆ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ಅಭಿನಯದ ಚಿತ್ರದಲ್ಲಿನ ಕೆಲ ಸನ್ನಿವೇಶಗಳು ಪಾಕಿಸ್ತಾನ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದು, ಇದೇ ಕಾರಣಕ್ಕೆ ಪಾಕಿಸ್ಚಾನ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕುತ್ತಿದೆ ಎನ್ನಲಾಗಿದೆ. ಈ ಹಿಂದೆ 2012ರಲ್ಲಿ ಬಾಲಿವುಡ್ ನಲ್ಲಿ ಬಿಡುಗಡೆಯಾಗಿ ಭಾರಿ ಸಕ್ಸಸ್ ಕಂಡಿದ್ದ ಕಭೀರ್ ಖಾನ್ ನಿರ್ದೇಶನದ ಏಕ್ ಥಾ ಟೈಗರ್ ಚಿತ್ರದ ಮುಂದುವರಿದ ಭಾಗವಾಗಿರುವ ಟೈಗರ್ ಜಿಂದಾ ಹೈ ಚಿತ್ರವನ್ನು ಅಲಿ ಅಬ್ಬಾಸ್ ಝಫರ್ ನಿರ್ದೇಶನ ಮಾಡಿದ್ದಾರೆ. 
ಚಿತ್ರದಲ್ಲಿ ಸಲ್ಮಾನ್ ಖಾನ್ ಭಾರತದ ಗುಪ್ತಚರ ಸಂಸ್ಥೆ ರಾ ಏಜೆಂಟ್ ಆಗಿ ಕಾಣಿಸಿಕೊಂಡಿದ್ದು, ನಟಿ ಕತ್ರೀನಾ ಕೈಫ್ ಪಾಕಿಸ್ತಾನ ಗುಪ್ತಚರ ಸಂಸ್ಥೆಯ ಏಜೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಭಯೋತ್ರಾದಕರ ವಿರುದ್ಧ ಜಂಟಿಯಾಗಿ ಹೋರಾಡುವ ಕಥಾಹಂಧರವನ್ನು ಟೈಗರ್ ಜಿಂದಾ ಹೈ ಹೊಂದಿದೆ. 
ಇದೇ ಚಿತ್ರಕಥೆ ಪಾಕಿಸ್ತಾನ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಅಲ್ಲಿನ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಚಿತ್ರದ ಕೆಲ ಸನ್ನಿವೇಶಗಳು ಪಾಕಿಸ್ತಾನದ ಹಿತಾಸಕ್ತಿಗೆ ಧಕ್ಕೆ ತರುವಂತಿದೆ ಎಂದು ಆರೋಪಸಿದೆ. ಇದೇ ಕಾರಣಕ್ಕೆ ಚಿತ್ರಕ್ಕೆ ಎನ್ ಒಸಿ ನೀಡದಂತೆ ಸೆನ್ಸಾರ್ ಮಂಡಳಿಗೆ ನಿರ್ದೇಶನ ನೀಡಿದೆ ಎಂದು ಹೇಳಲಾಗಿದೆ. ಇಂತಹುದೇ ಪರಿಸ್ಥಿತಿ 2012ರಲ್ಲಿ ಬಿಡುಗಡೆಯಾಗಿದ್ದ ಏಕ್ ಥಾ ಟೈಗರ್ ಚಿತ್ರಕ್ಕೂ ಎದುರಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com