ಪ್ರಧಾನಿ ಮೋದಿ ಆಧಾರಿದ ಚಿತ್ರ ಬಿಡುಗಡೆಗೆ ಅನುಮತಿ ನಿರಾಕರಿಸಿದ ಸೆನ್ಸಾರ್ ಮಂಡಳಿ

ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಆಧಾರಿತ ಚಿತ್ರಕ್ಕೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮುಂಬೈ: ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಆಧಾರಿತ ಚಿತ್ರಕ್ಕೆ ಅನುಮತಿ ನೀಡಲು ಸೆನ್ಸಾರ್ ಮಂಡಳಿ ಗುರುವಾರ ನಿರಾಕರಿಸಿದೆ.
ಮಧ್ಯಮ ಬಜೆಟ್ ನ 'ಮೋದಿ ಕಾ ಗಾವ್' ಚಿತ್ರವನ್ನು ನಿರ್ಮಿಸುತ್ತಿರುವ ಸುರೇಶ್ ಜಾ ಅವರು ತುಶಾರ್ ಎ ಗೋಯಲ್ ಅವರೊಂದಿಗೆ ಸಹ ನಿರ್ದೇಶನ ಮಾಡಿದ್ದು, ಶುಕ್ರವಾರ ಬಿಡುಗಡೆ ಮಾಡಲು ಕೇಂದ್ರ ಸೆನ್ಸಾರ್ ಮಂಡಳಿಯ ಅನುಮತಿ ಕೇಳಿದ್ದರು.
ಚಿತ್ರದಲ್ಲಿ ಮೂರು ಆಕ್ಷೇಪಾರ್ಹ ಅಂಶಗಳಿದ್ದು, ಬಿಡುಗಡೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸೆನ್ಸಾರ್ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಚಿತ್ರ ನಾಳೆ ತೆರೆಗೆ ಬರುತ್ತಿಲ್ಲ. ಆದರೆ ಸೆನ್ಸಾರ್ ಮಂಡಳಿಯ ವಿರುದ್ಧ ತಾವು ಕೋರ್ಟ್ ಮೆಟ್ಟಿಲೇರುವುದಾಗಿ ಜಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಚಿತ್ರದಲ್ಲಿ ಉರಿ ಉಗ್ರ ದಾಳಿ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಭಾಷಣಗಳಿರುವುದರಿಂದ ಪ್ರಧಾನಮಂತ್ರಿಗಳ ಕಚೇರಿಯಿಂದ ಹಾಗೂ ಕೇಂದ್ರ ಚುನಾವಣಾ ಆಯೋಗದಿಂದ ಎನ್ಒಸಿ ಪಡೆದು ಸಲ್ಲಿಸುವಂತೆ ಸೆನ್ಸಾರ್ ಮಂಡಳಿ ಜಾ ಅವರಿಗೆ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com