ಮರಿಯಪ್ಪನ್ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಾರುಖ್ ಖಾನ್

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ಧನುಷ್ ನಿರ್ದೇಶನದ ಹೊಸ ಚಿತ್ರ ಮರಿಯಪ್ಪನ್ ಚಿತ್ರದ ಫಸ್ಟ್ ಲುಕ್ ಅನ್ನು ಬಾಲಿವುಡ್ ನಟ ಶಾರುಖ್ ಖಾನ್....
ಮರಿಯಪ್ಪನ್
ಮರಿಯಪ್ಪನ್
Updated on
ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ಧನುಷ್ ನಿರ್ದೇಶನದ ಹೊಸ ಚಿತ್ರ ಮರಿಯಪ್ಪನ್ ಚಿತ್ರದ ಫಸ್ಟ್ ಲುಕ್ ಅನ್ನು ಬಾಲಿವುಡ್ ನಟ ಶಾರುಖ್ ಖಾನ್ ಬಿಡುಗಡೆ ಮಾಡಿದ್ದಾರೆ. 
ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಾರುಖ್ ಖಾನ್ ತಮ್ಮ ಟ್ವೀಟರ್ ಖಾತೆಯಲ್ಲಿ ಫೋಟೋವನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೂ ಮರಿಯಪ್ಪನ್ ದರ್ಶನ ಮಾಡಿಸಿದ್ದಾರೆ. 
ಫೋಟೋ ಕೆಳಗೆ ನಮ್ಮ ದೇಶದ ಹೀರೋ ಮರಿಯಪ್ಪನ್ ತಂಗವೇಲು ಅವರ ಜೀವನಾಧಾರಿತ ಚಿತ್ರದ ಫಸ್ಟ್ ಲುಕ್ ಇಲ್ಲಿದೆ ನೋಡಿ. ಆಲ್ ದ ಬೆಸ್ಟ್ ಐಶ್ವರ್ಯಾ ಎಂದು ಶಾರುಖ್ ಟ್ವೀಟ್ ಮಾಡಿದ್ದಾರೆ. 
ಕಳೆದ ವರ್ಷ ರಿಯೋ ಡಿ ಜನೈರೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ನ ಹೈಜಂಪ್ ವಿಭಾಗದಲ್ಲಿ ದೇಶಕ್ಕೆ ಚಿನ್ನದ ಪದಕ ತಂದ ಕ್ರೀಡಾಪಟು ಮರಿಯಪ್ಪನ್ ತಂಗವೇಲು ಅವರ ಜೀವನಾಧಾರಿತ ಕಥೆ ಚಿತ್ರಕ್ಕಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com