ಬೆಂಗಳೂರಿನಲ್ಲಿ ಹೊಸ ವರ್ಷದಂದು ಮಹಿಳೆಯರಿಗೆ ಲೈಂಗಿಕ ಕಿರುಕುಳ, ಹೃತಿಕ್ ರೋಷನ್ ಖಂಡನೆ

ಹೊಸ ವರ್ಷದಂದು ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಸಾರ್ವಜನಿಕವಾಗಿ ನಡೆದ ಲೈಂಗಿಕ ಕಿರುಕುಳ ಪ್ರಕರಣವನ್ನು...
ಹೃತಿಕ್ ರೋಷನ್
ಹೃತಿಕ್ ರೋಷನ್
ಮುಂಬೈ: ಹೊಸ ವರ್ಷದಂದು ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಸಾರ್ವಜನಿಕವಾಗಿ ನಡೆದ ಲೈಂಗಿಕ ಕಿರುಕುಳ ಪ್ರಕರಣವನ್ನು ಬಾಲಿವುಡ್ ನಟ ಹೃತಿಕ್ ರೋಷನ್ ಅವರು ಗುರುವಾರ ಖಂಡಿಸಿದ್ದಾರೆ.
ಡಿಸೆಂಬರ್ 31ರಂದು ಮಧ್ಯರಾತ್ರಿ ನಡೆದ ಘಟನೆ ಒಂದು ದುಃಖಕರ ವಿಚಾರ. ಸಮಾಜದ ಪ್ರತಿಯೊಬ್ಬರು ಇದರ ಜವಾಬ್ದಾರಿ ಹೊರಬೇಕು ಮತ್ತು ಇದನ್ನು ತಡೆಯಲು ನಾವು ಏನಾದರೂ ಮಾಡಲೇಬೇಕು ಎಂದು ಹೃತಿಕ್ ರೋಷನ್ ಅವರು ವರದಿಗಾರರಿಗೆ ಹೇಳಿದ್ದಾರೆ.
ಒಬ್ಬ ತಂದೆಯಾಗಿ, ಸಮಾಜದ ವ್ಯಕ್ತಿಯಾಗಿ ಈ ಘಟನೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಬಾಲಿವುಡ್ ನಟ ತಿಳಿಸಿದ್ದಾರೆ.
ಡಿಸೆಂಬರ್ 31ರಂದು ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಪೊಲೀಸರ ಸಮ್ಮುಖದಲ್ಲೇ ಹಲವು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಇದು ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com