ಬಾಲಿವುಡ್

ಐಶ್ವರ್ಯ ರೈ ಜತೆ ನಿರ್ದೇಶಕ ಮಣಿರತ್ನಂ ಮುಂದಿನ ಚಿತ್ರ?

ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಬಾಲಿವುಡ್ ನಟಿ ಐಶ್ವರ್ಯ ರೈ ಜತೆ ಮುಂದಿನ ಚಿತ್ರವನ್ನು ಮಾಡಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದೆ...

ಐಶ್ವರ್ಯ ರೈ ಜತೆ ನಿರ್ದೇಶಕ ಮಣಿರತ್ನಂ ಮುಂದಿನ ಚಿತ್ರ?
ಐಶ್ವರ್ಯ ರೈ
Published On :
ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಬಾಲಿವುಡ್ ನಟಿ ಐಶ್ವರ್ಯ ರೈ ಜತೆ ಮುಂದಿನ ಚಿತ್ರವನ್ನು ಮಾಡಲಿದ್ದು ಹಿಂದಿ ಮತ್ತು ತಮಿಳಿನಲ್ಲಿ ಚಿತ್ರ ಸೆಟ್ಟೇರಲಿದೆ ಎಂಬ ವದಂತಿಗಳು ಹರಿದಾಡುತ್ತಿದೆ. 
ತಮ್ಮ ಮುಂದಿನ ಚಿತ್ರಕ್ಕಾಗಿ ಮಣಿರತ್ನಂ ಅವರು ಐಶ್ವರ್ಯ ರೈ ಬಚ್ಚನ್ ಅವರನ್ನು ಸಂಪರ್ಕಿಸಿದ್ದಾರೆ ಎಂದು ಹೇಳಲಾಗಿದ್ದು ಮುಂದಿನ ದಿನಗಳಲ್ಲಿ ಅಧಿಕೃತ ಸುದ್ದಿ ಹೊರಬೀಳಲಿದೆ. 
ಈ ಚಿತ್ರದಲ್ಲಿ ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಸಹ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು ಅಧಿಕೃತ ಮಾಹಿತಿ ಇಲ್ಲ. 
ಅದಿತಿ ರಾವ್ ಹೈದರಿ ಅವರು ಈ ಹಿಂದಿನ ಮಣಿರತ್ನಂ ಚಿತ್ರ ಕಾಟ್ರು ವೆಳಿಯಿದೈ ಚಿತ್ರದಲ್ಲಿ ನಟಿಸಿದ್ದಾರೆ. ಕಾಟ್ರು ವೆಳಿಯಿದೈ ಚಿತ್ರದ ಕುರಿತಂತೆ ಸಂದರ್ಶನವೊಂದರಲ್ಲಿ ಅದಿತಿ ಮಾಂತ್ರಿಕ ನಿರ್ದೇಶಕ ಮಣಿರತ್ನಂ ಅವರೊಂದಿಗೆ ಕೆಲಸ ಮಾಡುವುದು ತುಂಬಾ ಸಂತೋಷದ ವಿಷಯ ಅವರು ಬೆಳ್ಳಿತೆರೆ ಮೇಲೆ ಜಾದೂ ಮಾಡುತ್ತಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.