ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬಿಗ್ ಬಿಗೆ ವರ್ಷದ ವ್ಯಕ್ತಿ ಗೌರವ

ಗೋವಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ಬಿಗ್....
ಅಮಿತಾಬ್ ಬಚ್ಚನ್
ಅಮಿತಾಬ್ ಬಚ್ಚನ್
Updated on: 
ನವದೆಹಲಿ: ಗೋವಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯದ ಮೂಲಗಳು ತಿಳಿಸಿವೆ.
ತಮ್ಮ 5 ದಶಕಗಳಿಗೂ ಅಧಿಕ ಕಾಲದ ವೃತ್ತಿ ಬದುಕಿನಲ್ಲಿ 190ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ 75 ವರ್ಷದ ಮೆಗಾಸ್ಟಾರ್ ನಾಲ್ಕು ರಾಷ್ಟ್ರ ಪ್ರಶಸ್ತಿ ಮತ್ತು 15 ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.
ಇದೇ ತಿಂಗಳು 20ರಿಂದ 28ರವರೆಗೆ ಗೋವಾದಲ್ಲಿ ನಡೆಯಲಿರುವ ಚಲನಚಿತ್ರೋತ್ಸವದಲ್ಲಿ ಬಚ್ಚನ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 1952ರಲ್ಲಿ ಆರಂಭವಾಗಿದ್ದು, ಏಷ್ಯಾ ಖಂಡದಲ್ಲಿ ಒಂದು ಪ್ರತಿಷ್ಟಿತ ಚಲನಚಿತ್ರೋತ್ಸವ ಎಂಬ ಹೆಗ್ಗಳಿಕೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com