ಮುಂಬೈ: ಬಾಲಿವುಡ್ ನಿರ್ದೇಶಕ ಹಾಗೂ ನಿರ್ಮಾಪಕ ಮಹೇಶ್ ಭಟ್ ಅವರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕೋರ್ಟ್ ಭೂಗತ ಪಾತಕಿ ರವಿ ಪೂಜಾರಿ ಗ್ಯಾಂಗ್ ನ 10 ಮಂದಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ವಿಶೇಷ ಕೋರ್ಟ್ ನ್ಯಾಯಾಧೀಶ ಶ್ರೀಧರ್ ಭೋಸ್ಲೆ ಅವರು, 10 ಮಂದಿಗೆ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಇತರೆ ಇಬ್ಬರನ್ನು ಖುಲಾಸೆಗೊಳಿಸಿದ್ದಾರೆ ಎಂದು ಸರ್ಕಾರಿ ಅಭಿಯೋಜಕ ಪ್ರದೀಪ್ ಘರತ್ ಅವರು ತಿಳಿಸಿದ್ದಾರೆ.
2014ರಲ್ಲಿ ಮಹೇಶ್ ಭಟ್ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ರವಿ ಪೂಜಾರಿ ಗ್ಯಾಂಗ್ ನ 12 ಮಂದಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದರು.