ಬಾಲಿವುಡ್

ಲೈಂಗಿಕ ಕಿರುಕುಳ: ಯುಎಇನಲ್ಲಿ ಖ್ಯಾತ ಗಾಯಕ ಮಿಕಾ ಸಿಂಗ್ ಬಂಧನ

ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಖ್ಯಾತ ಗಾಯಕ ಮಿಕಾ ಸಿಂಗ್ ರನ್ನು ಯುಎಇನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಲೈಂಗಿಕ ಕಿರುಕುಳ: ಯುಎಇನಲ್ಲಿ ಖ್ಯಾತ ಗಾಯಕ ಮಿಕಾ ಸಿಂಗ್ ಬಂಧನ
ಸಂಗ್ರಹ ಚಿತ್ರ
Published On :
ದುಬೈ: ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಖ್ಯಾತ ಗಾಯಕ ಮಿಕಾ ಸಿಂಗ್ ರನ್ನು ಯುಎಇನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಸುದ್ದಿಸಂಸ್ಥೆಯೊಂದರ ವರದಿಯ ಪ್ರಕಾರ ಗಾಯಕ ಮಿಕಾ ಸಿಂಗ್ ವಿರುದ್ಧ 17 ವರ್ಷದ ಬ್ರೆಜಿಲ್ ಮೂಲದ ಯುವತಿಯೊಬ್ಬಳು ದೂರು ನೀಡಿದ್ದು, ಯುವತಿ ದೂರಿನ ಆಧಾರದ ಮೇರೆಗೆ ಮಿಕಾ ಸಿಂಗ್ ರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಮಿಕಾ ಸಿಂಗ್ ರನ್ನು ವಶಕ್ಕೆ ಪಡೆದಿರುವ ಪೊಲೀಸುರ ವಿಚಾರಣೆ ನಡೆಸುತ್ತಿದ್ದಾರೆ.
ಬಾಲಿವುಡ್ ನ ವಿವಾದಿತ ಗಾಯಕ ಮಿಕಾ ಸಿಂಗ್ ಸಾಕಷ್ಟು ಬಾರಿ ಇಂತಹ ವಿವಾದಗಳಿಗೆ ಸಿಲುಕಿದ ಉದಾಹರಣೆಗಳಿದ್ದು, ಈ ಹಿಂದೆ 2016ರಲ್ಲಿ ಮುಂಬೈ ಮೂಲದ ರೂಪದರ್ಶಿಯೊಬ್ಬಳು ಇದೇ ಮಿಕಾ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದರು. ಇದಕ್ಕೂ ಮೊದಲು ಅಂದರೆ 2006ರಲ್ಲಿ ಇದೇ ಮಿಕಾ ಸಿಂಗ್ ಬಾಲಿವುಡ್ ನಟಿ ರಾಖಿಸಾವಂತ್ ರನ್ನು ಸಾರ್ವಜನಿಕವಾಗಿ ಬಲವಂತದಿಂದ ಚುಂಬಿಸಿ ಸುದ್ದಿಗೆ ಗ್ರಾಸವಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.