

ಪ್ರಸ್ತುತ ಚಿತ್ರರಂಗದಲ್ಲಿ ಕಿಚ್ಚ ಸುದೀಪ್ ಅತ್ಯುತ್ತಮ ಸ್ಥಾನದಲ್ಲಿದ್ದಾರೆ. ಕನ್ನಡದ ಮೂರು ಚಿತ್ರಗಳನ್ನು ಹೊರತುಪಡಿಸಿ ತೆಲುಗಿನ ಸೂಪರ್ ಸ್ಟಾರ್ ಚಿರಂಜೀವಿ ಅವರೊಂದಿಗೆ ಸೈರಾ ನರಸಿಂಹ ರೆಡ್ಡಿ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.
ತಮಿಳಿನಲ್ಲಿ ಧನುಸ್ ಅವರೊಂದಿಗಿನ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹಾಲಿವುಡ್ ನ ರೈಸನ್ ಚಿತ್ರದಲ್ಲೂ ನಟಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.